ಕನ್ನಡ ಚಿತ್ರರಂಗದ ಹಾಸ್ಯ ನಟ‌ ಎಂ.ಎಸ್‌ ಉಮೇಶ್ ನಿಧನ – vishwanews24

Featured, ರಾಜ್ಯ ನ್ಯೂಸ್

ಕನ್ನಡ ಚಿತ್ರರಂಗದ ಹಾಸ್ಯ ನಟ‌ ಎಂ.ಎಸ್‌ ಉಮೇಶ್ ನಿಧನ

ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಎಸ್ ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಜಾರಿಬಿದ್ದಿದ್ದ ಉಮೇಶ್‌ ಕಾಲು ಮತ್ತು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣವೇ ಅವರನ್ನ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುವಾಗ ಅವರಿಗೆ ಕ್ಯಾನ್ಸರ್‌ ಇರೋದು ಪತ್ತೆಯಾಗಿತ್ತು. ಕಾಲಿಗೆ ಸರ್ಜರಿ ಮಾಡುವಾಗ ಅವರಿಗೆ ಲಿವರ್ ಕ್ಯಾನ್ಸರ್ ಇರುವ ಬಗ್ಗೆಯೂ ವೈದ್ಯರು ಮಾಹಿತಿ ನೀಡಿದರು. ಹೀಗಾಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್‌ ಅವರಿಂದು ಇಹಲೋಕ ತ್ಯಜಿಸಿದ್ದಾರೆ

Leave a Reply