ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರು ನಿಧನಕ್ಕೆ ಸಿಎಂ ಬಿಎಸ್‍ವೈ ತೀವ್ರ ಸಂತಾಪ -Vishwanews24
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರು ನಿಧನಕ್ಕೆ ಸಿಎಂ ಬಿಎಸ್‍ವೈ ತೀವ್ರ ಸಂತಾಪ -Vishwanews24
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆಸಿಎನ್ ಚಂದ್ರು ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ತಂದೆ ಕೆ.ಸಿ. ನಂಜುಂಡೇಗೌಡ ಅವರಿಂದ ಪ್ರಭಾವಿತರಾಗಿ 50ಕ್ಕೂ ಹೆಚ್ಚು ಜನಪ್ರಿಯ ಕನ್ನಡ ಚಿತ್ರಗಳನ್ನು ನಿರ್ಮಿಸಿದ್ದ ಅವರು ಹುಲಿಯ ಹಾಲಿನ ಮೇವು, ಬಬ್ರುವಾಹನ ಮುಂತಾದ ಅತ್ಯುತ್ತಮ ಚಿತ್ರಗಳನ್ನು ನಿರ್ಮಿಸಿದ್ದರು. ಮೂರು ಅವಧಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದರು. ಸಿನಿಮಾಗಳ ಬಗ್ಗೆ ಉತ್ತಮ ಜ್ಞಾನ ಹೊಂದಿದ್ದರು.
ಚಂದ್ರು ನಿಧನದಿಂದ ಅತ್ಯುತ್ತಮ ನಿರ್ಮಾಪಕರನ್ನು ಕನ್ನಡ ಚಿತ್ರರಂಗ ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಹಿರಿಯ ನಿರ್ಮಾಪಕ ಕೆ.ಸಿ.ಎನ್.ಚಂದ್ರುರವರ ನಿಧನಕ್ಕೆ ಮುಖ್ಯಮಂತ್ರಿ @BSYBJP ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗ ಅತ್ಯುತ್ತಮ ನಿರ್ಮಾಪಕರನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ
— CM of Karnataka (@CMofKarnataka) June 14, 2021
