ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ನ01ರ ಮಂಗಳವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನೀಲ್ ಕುಮಾರ್ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಸಚಿವರು,ಕನ್ನಡವನ್ನು ಬೆಳೆಸಬೇಕಾದರೆ ಅದನ್ನು ಬಳಸಬೇಕಾಗಿರುತ್ತದೆ. ಆಡಳಿತದಲ್ಲಿ ಕನ್ನಡ ಜಾರಿಗೊಳಿಸಲು ಈಗಾಗಲೇ ನಮ್ಮ ಸರಕಾರ ಪ್ರತಿಬದ್ದವಾಗಿದ್ದು, ಕನ್ನಡ ಭಾಷೆಯನ್ನು ವ್ಯಾಪಕವಾಗಿ ಬಳಸಲು ಕ್ರಮವಹಿಸಲಾಗುತ್ತಿದೆ.ಸುತ್ತೋಲೆಗಳು, ಆದೇಶಗಳು, ನೋಟಿಸ್‌ಗಳು, ಅಧಿಕೃತ ಜ್ಞಾಪನ, ಅಧಿಸೂಚನೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಹೊರಡಿಸಲಾಗುತ್ತಿದೆ. ಡಾ. ಸರೋಜಿನಿ ಮಹಿಷಿ ವರದಿ ಶಿಫಾರಸ್ಸುಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಸಮೀಕ್ಷಾ ವರದಿಯನ್ನು ವಿವಿಧ ಇಲಾಖೆಗಳು ಸರ್ಕಾರಕ್ಕೆ ಸಲ್ಲಿಸುತ್ತಿವೆ ಎಂದು ಹೇಳಿದರು.
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ – Vishwanews24
ಕನ್ನಡದ ಸತ್ವ, ಸೊಗಸು, ಹಿರಿಮೆಗಳನ್ನು ಎತ್ತರಕ್ಕೇರಿಸಿದ ಬಿ.ಎಂ. ಶ್ರೀ, ಕುವೆಂಪು, ಬೇಂದ್ರೆ, ಕಾರಂತ, ಮಾಸ್ತಿ, ರನ್ನಾಧಿಯಾಗಿ ಈಗಿನ ಎಲ್ಲಾ ಆಧುನಿಕ ಕವಿಗಳ ಕನ್ನಡ ನಾಡು, ನುಡಿ, ಸಂಸ್ಕೃತಿಯ ಮೇಲಿನ ಉತ್ಕತ ಅಭಿಮಾನ ನಮ್ಮ ಆದರ್ಶವಾಗಬೇಕು. ನಮ್ಮ ಭಾಷೆಯನ್ನು ಉಳಿಸಿ ಬೆಳೆಸುತ್ತಲೇ ಇತರ ಭಾಷೆಯನ್ನು ಉಳಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಯು.ಟಿ. ಖಾದರ್, ಉಮನಾಥ್ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…