ಹಾಸ್ಯಮಯ ಚಿತ್ರಗಳಲ್ಲಿ ಒಂದಾಗಿರುವ ‘ಸು ಫುಮ್ ಸೋ’ ಸಿನಿಮಾವು ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಭರ್ಜರಿ ಬ್ಲಾಕ್‌ಬಸ್ಟರ್ ಆಗಿ ಹೊರಹೊಮ್ಮಿದೆ. ಸಿನಿಮಾವು ಬಿಡುಗಡೆ ಆದ ಮೂರನೇ ದಿನವೇ ಅಡ್ವಾನ್ಸ್ ಬುಕ್ಕಿಂಗ್ ಮೂಲಕವೇ 2.4 ಕೋಟಿ ರೂಪಾಯಿಗಿಂತ ಹೆಚ್ಚು ಗಳಿಕೆ ಮಾಡಿದೆ ಎಂಬ ಸುದ್ದಿ ಹೊರಬಿದ್ದಿದೆ. ಸಿನಿಮಾ ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಕಲೆಕ್ಷನ್ 8 ಕೋಟಿ ರೂ. ದಾಟುವ ನಿರೀಕ್ಷೆಯಿದೆ.
ಈ ಸಿನಿಮಾವನ್ನು ಜೆ.ಪಿ. ತುಮಿನಾಡ್ ಬರೆದು ನಿರ್ದೇಶಿಸಿದ್ದಾರೆ. ರಾಜ್ ಬಿ ಶೆಟ್ಟಿ ಅವರು ಚಿತ್ರವನ್ನು ನಿರ್ಮಿಸಿದ್ದು ಮಾತ್ರವಲ್ಲದೇ ನಾಯಕನಾಗಿಯೂ ಅಭಿನಯಿಸಿದ್ದರೆ. ಶನೀಲ್ ಗೌತಮ್ ಮತ್ತು ಸಂಧ್ಯಾ ಅರೆಕೆರೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಹಾಸ್ಯಮಯ ಚಿತ್ರವು ಕರ್ನಾಟಕದ ಕರಾವಳಿ ಪ್ರದೇಶವಾದ ಸೋಮೇಶ್ವರದ ಮಾಡ್ಯಾರ್ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ಪ್ರಸ್ತುತಪಡಿಸುತ್ತದೆ. ಈ ಸಿನಿಮಾ ಬಗೆಗಿನ ಸಕರಾತ್ಮಕ ವಿಮರ್ಶೆಗೆ ರಾಜ್ಯದಾದ್ಯಂತ ಈ ಚಿತ್ರವನ್ನು ವೀಕ್ಷಿಸಲು ಪ್ರೇಕ್ಷಕರು ಥಿಯೇಟರ್‌ಗಳತ್ತ ಮುಗಿಬಿದ್ದ ದೃಶ್ಯ ಕಂಡುಬಂದಿದ್ದಾರೆ.
ಸಿನಿಮಾ ಪ್ರೀಯರಿಂದ ಭಾರೀ ಸದ್ದು ಮಾಡುತ್ತಿರುವ ಈ ಸಿನಿಮಾವನ್ನ ‘ಪುಷ್ಪ’ ಮತ್ತು ‘ಕೆಜಿಎಫ್’ ಸಿನಿಮಾಗಳನ್ನು ವಿತರಣೆ ಮಾಡಿದ್ದ ಅನಿಲ್ ಟಂಡಾನಿ ಅವರ ಎಎ ಫಿಲಂಸ್ ಸಂಸ್ಥೆ, ಈ ಚಿತ್ರದ ಹಿಂದಿ ಆವೃತ್ತಿಯನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲಿದೆ ಎಂದು ತಿಳಿದು ಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…