ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ. ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
‘ಮೆಜೆಸ್ಟಿಕ್’ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ಮಾಣ ಮಾಡಿರುವ ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ಗೌಡ (28) ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್ ಹೋದಾಗ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಇತ್ತೀಚೆಗಷ್ಟೇ ಚಂದನಾ ಗೌಡ ಎನ್ನುವವರ ಜತೆ ಉಲ್ಲಾಸ್ ಗೌಡ ಮದುವೆ ನಿಶ್ಚಯವಾಗಿತ್ತು. ಕುಟುಂಬಸ್ಥರು ನಿರ್ಣಯದಂತೆ ಇದೇ ವರ್ಷ ಮದುವೆ ಮದುವೆ ಆಗಬೇಕಿತ್ತು. ಆದರೆ ಮದುವೆ ಮುನ್ನವೇ ಅವರು ನಿಧನ ಹೊಂದಿದ್ದು, ಕುಟುಂಬಸ್ಥರಿಗೆ ದೊಡ್ಡ ಆಘಾತವನ್ನೇ ನೀಡಿದೆ.
ಉಲ್ಲಾಸ್ ಗೌಡ, ಉದ್ಯಮಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು. ಇತ್ತೀಚೆಗೆ ಅವರು ಎಂಗೇಜ್‌ಮೆಂಟ್ ಫೋಟೋಸ್‌ಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿತ್ತು.
ಭಾ ಮಾ ಹರೀಶ್ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…