ಚೆನ್ನೈ : ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ ಡಿ. ಚಾರುಕವಿ (23), ನೆಯ್‌ವೇಲಿ ನಿವಾಸಿ ಬಿ. ಗಾಯತ್ರಿ (25), ಕನ್ಯಾಕುಮಾರಿ ಸ್ಥಳೀಯ ಪಿ. ಸರ್ವದರ್ಶಿತ್ (23), ಡಿಂಡಿಗಲ್ ಸ್ಥಳೀಯ ಎಂ. ಪ್ರವೀಣ್ ಸಾಂ (23), ಆಂಧ್ರಪ್ರದೇಶದಲ್ಲಿರುವ ವೆಂಕಟೇಶ್ (24) ಮೃತಪಟ್ಟವರು.
ಕಾಲೇಜಿನ ಒಂದು ತಂಡ ತಮ್ಮ ಸಹಪಾಠಿಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ಕನ್ಯಾಕುಮಾರಿಗೆ ಆಗಮಿಸಿದ್ದರು. ಈ ವೇಳೆ ಕೆಲ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ಬಳಿ ಮುಚ್ಚಲ್ಪಟ್ಟಿರುವ ಲೇಮೂರ್ ಬೀಚ್‌ಗೆ ತೆಂಗಿನತೋಟವೊಂದರ ಮೂಲಕ ಸೋಮವಾರ ಮುಂಜಾನೆ ಪ್ರವೇಶ ಮಾಡಿದ್ದರು. ಇಲ್ಲಿ ನೀರಿನ ಮಟ್ಟ ಜಾಸ್ತಿ ಇತ್ತು. ಈಜು ಬಾರದೇ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಐವರೂ ಮೃತಪಟ್ಟಿದ್ದಾರೆ. ಮೂವರನ್ನು ರಕ್ಷಿಸಲಾಗಿದೆ ಎಂದು ಕನ್ಯಾಕುಮಾರಿ ಎಸ್.ಪಿ ಈ. ಸುಂದರವದನಂ ಎನ್‌ಡಿಟಿವಿಗೆ ತಿಳಿಸಿದ್ದಾರೆ. ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದ ಮೃತರು ಇನ್ನೇನು ಪದವಿ ಮುಗಿಸಿ ಕಾಲೇಜಿನಿಂದ ಹೊರಡುವವರಿದ್ದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…