Featured

ಕನ್ಯಾಕುಮಾರಿ :  ಸಮುದ್ರಪಾಲಾದ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು – Vishwanews24

ಕನ್ಯಾಕುಮಾರಿ :  ಸಮುದ್ರಪಾಲಾದ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು

ಚೆನ್ನೈ : ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ.

ಮೃತರನ್ನು ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ ಡಿ. ಚಾರುಕವಿ (23), ನೆಯ್‌ವೇಲಿ ನಿವಾಸಿ ಬಿ. ಗಾಯತ್ರಿ (25), ಕನ್ಯಾಕುಮಾರಿ ಸ್ಥಳೀಯ ಪಿ. ಸರ್ವದರ್ಶಿತ್ (23), ಡಿಂಡಿಗಲ್ ಸ್ಥಳೀಯ ಎಂ. ಪ್ರವೀಣ್ ಸಾಂ (23), ಆಂಧ್ರಪ್ರದೇಶದಲ್ಲಿರುವ ವೆಂಕಟೇಶ್ (24) ಮೃತಪಟ್ಟವರು.

ಕಾಲೇಜಿನ ಒಂದು ತಂಡ ತಮ್ಮ ಸಹಪಾಠಿಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ಕನ್ಯಾಕುಮಾರಿಗೆ ಆಗಮಿಸಿದ್ದರು. ಈ ವೇಳೆ ಕೆಲ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ಬಳಿ ಮುಚ್ಚಲ್ಪಟ್ಟಿರುವ ಲೇಮೂರ್ ಬೀಚ್‌ಗೆ ತೆಂಗಿನತೋಟವೊಂದರ ಮೂಲಕ ಸೋಮವಾರ ಮುಂಜಾನೆ ಪ್ರವೇಶ ಮಾಡಿದ್ದರು. ಇಲ್ಲಿ ನೀರಿನ ಮಟ್ಟ ಜಾಸ್ತಿ ಇತ್ತು. ಈಜು ಬಾರದೇ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಐವರೂ ಮೃತಪಟ್ಟಿದ್ದಾರೆ. ಮೂವರನ್ನು ರಕ್ಷಿಸಲಾಗಿದೆ ಎಂದು ಕನ್ಯಾಕುಮಾರಿ ಎಸ್‌.ಪಿ ಈ. ಸುಂದರವದನಂ ಎನ್‌ಡಿಟಿವಿಗೆ ತಿಳಿಸಿದ್ದಾರೆ. ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದ ಮೃತರು ಇನ್ನೇನು ಪದವಿ ಮುಗಿಸಿ ಕಾಲೇಜಿನಿಂದ ಹೊರಡುವವರಿದ್ದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

17 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

17 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

18 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

18 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

18 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

18 hours ago