ಕಪಾಲ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವುದು ನಮ್ಮ ಹಕ್ಕು : ಐವಾನ್ ಡಿಸೋಜಾ -Vishwanews24

ಬೆಂಗಳೂರು: ಕನಕಪುರ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ಸ್ಥಾಪನೆ ವಿಚಾರ ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ವಸ್ತು ಸ್ಥಿತಿ ಅರಿಯುವುದಕ್ಕಾಗಿ ಕ್ರಿಶ್ಚಿಯನ್ ಸಮುದಾಯದ ಮುಖಂಡರ ಸತ್ಯಶೋಧನಾ ಸಮಿತಿಯೊಂದನ್ನು ರಚಿಸಲಾಗಿತ್ತು. ಅದರ ವರದಿ ಪ್ರಕಾರ ಅಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವುದು ನಮ್ಮ ಹಕ್ಕು ಎಂದು ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಹೇಳಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಡಿಸೋಜಾ, ಸತ್ಯಶೋಧನಾ ಸಮಿತಿ ಸಿದ್ಧಪಡಿಸಿರುವ ವರದಿಯನ್ನು ನಾವು ಸಿಎಂ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಆರ್ ಅಶೋಕ್ ಗೆ ಸಲ್ಲಿಸುತ್ತೇವೆ. ಏಸು ಪ್ರತಿಮೆಯನ್ನು ಸರ್ಕಾರವೇ ಮುಂದೆ ನಿಂತು ನಿರ್ಮಿಸಲಿ ಎಂದು ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.

ಕಲ್ಲಡ್ಕ ಪ್ರಭಾಕರ ಭಟ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸೋಜಾ, ಸ್ಥಳೀಯ ಶಾಸಕರಾಗಿ ಕ್ರೈಸ್ತರಿಗೆ ಡಿಕೆಶಿ ಸಹಾಯ ಮಾಡಿದ್ದು ತಪ್ಪಲ್ಲ. ಪ್ರತಿಯೊಬ್ಬರೂ ತಮ್ಮತಮ್ಮ ಧಾರ್ಮಿಕ ನಾಯಕರ ಪ್ರತಿಮೆ ನಿರ್ಮಿಸಲು ಹಕ್ಕಿದೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕೃಷ್ಣನ ಪ್ರತಿಮೆಯನ್ನು ಕಲ್ಲಡ್ಕದಲ್ಲಿ ನಿರ್ಮಿಸಲಿ. ಆಗ ನಾವೆಲ್ಲ ಅವರಿಗೆ ನೆರವು ಕೊಡ್ತೇವೆ ಎಂದು ಹೇಳಿದರು.

ಕಪಾಲ ಬೆಟ್ಟದಲ್ಲಿ 10 ಎಕರೆ ಭೂಮಿಯನ್ನು ಕಪಾಲಬೆಟ್ಟ ಅಭಿವೃದ್ಧಿ ಟ್ರಸ್ಟ್ ಗೆ ಅಧಿಕೃತವಾಗಿ ಸರ್ಕಾರವೇ ಮಂಜೂರು ಮಾಡಿತ್ತು. ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಗಳಿಗಾಗಿಯೇ ಇದನ್ನು ಬಳಸುವ ನಿರ್ಧಾರವೂ ಆಗಿದೆ. ಇತಿಹಾಸವನ್ನು ಗಮನಿಸಿದರೆ, 1670 ರಿಂದಲೇ ಕಪಾಲ ಬೆಟ್ಟದಲ್ಲಿ ಕ್ರೈಸ್ತರು ವಾಸ ಮಾಡಲಾರಂಭಿಸಿದ್ದಾರೆ. ಆ ಭಾಗದ ಕ್ರೈಸ್ತರು ರೇಷಿಮೆ ಬೆಳೆಯುತ್ತಿದ್ದರು. ಬೇರೆ ಸಮುದಾಯಗಳ ಜೊತೆಗೆ ಕ್ರೈಸ್ತರ ಉತ್ತಮ ಸಂಬಂಧ, ಒಡನಾಟ ಇತ್ತು. 1661 ರಲ್ಲಿ ಹಾರೋಬೆಲೆಯಲ್ಲಿ ಪ್ರಥಮ ಚರ್ಚ್ ನಿರ್ಮಿಸಲಾಗಿದೆ. ಆಗಲೇ 160 ಕ್ರೈಸ್ತ ಕುಟುಂಬಗಳು ಅಲ್ಲಿ ವಾಸವಾಗಿದ್ದವು ಎಂದು ಡಿಸೋಜಾ ಸತ್ಯಶೋಧನಾ ಸಮಿತಿಯ ವರದಿ ಅಂಶಗಳನ್ನು ಉಲ್ಲೇಖಿಸಿದರು.

ರಾಜಕೀಯ ದುರುದ್ದೇಶಕ್ಕಾಗಿ ಪ್ರಕರಣಕ್ಕೆ ವಿವಾದ ಬಳಿಯಲಾಗಿದೆ. ಗೋಮಾಳ ಭೂಮಿಯನ್ನು ಹಿಂದೂ, ಮುಸ್ಲಿಂ, ಕ್ರೈಸ್ತ ಇತರೇ ಸಮುದಾಯಗಳಿಗೆ ಸರ್ಕಾರ ಮೊದಲಿಂದಲೂ ಮಂಜೂರು ಮಾಡುತ್ತಾ ಬಂದಿದೆ. ಹಾಗೆಯೇ ಕಪಾಲ ಬೆಟ್ಟದಲ್ಲಿ ಕ್ರೈಸ್ತರಿಗೂ ಭೂಮಿ ಮಂಜೂರು ಮಾಡಲಾಗಿದೆ. ಇಲ್ಲಿ ವಿಷಬೀಜ ಬಿತ್ತುವ ಪ್ರಯತ್ನಗಳು ನಡೆದಿವೆ ಎಂದು ಡಿಸೋಜಾ ಆರೋಪಿಸಿದರು.

ಏಸುಪ್ರತಿಮೆ ನಿರ್ಮಾಣ ರಿಜೆಕ್ಟ್ ಮಾಡಲು ಹೇಗೆ ಬೇಕೋ ಹಾಗೆ ವರದಿ ರೂಪಿಸುವಂತೆ ಸರ್ಕಾರ ನಿರ್ದೇಶಿಸಿತ್ತು. ಕನಕಪುರ ತಹಸೀಲ್ದಾರ್ ರಿಗೆ ಸರ್ಕಾರ ನಿರ್ದೇಶನ ನೀಡಿತ್ತು. ಸರ್ಕಾರ ಹೇಳಿದಂತೆ ಜಿಲ್ಲಾಡಳಿತ ವರದಿ ತಯಾರಿಸಿದೆ ಎಂದೂ ಅವರು ಸರ್ಕಾರದ ವಿರುದ್ಧ ಆರೋಪಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago