ನವದೆಹಲಿ: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಆಯೋಜಿಸಿದ್ದು ಇದರ ಅಂಗವಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಪ್ಪು ಕುರ್ತಾ ಮತ್ತು ಕಪ್ಪು ಪೇಟ ಧರಿಸಿ ಸಂಸತ್ತಿನಲ್ಲಿ ಕಾಣಿಸಿಕೊಂಡಿದ್ದು, ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ.
ಇತ್ತೀಚೆಗೆ ಸಂಸತ್ ಉಭಯ ಕಲಾಪಗಳಲ್ಲಿ ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸಿದ ಕ್ರಮವನ್ನು ವಿರೋಧಿಸಿ ಗ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದಾಗ ಅಲ್ಲಿಯು ಮಲ್ಲಿಕಾರ್ಜುನ ಖರ್ಗೆ ಕಪ್ಪು ಪೇಟ ಸುತ್ತಿಕೊಂಡು ಗಮನ ಸೆಳೆದಿದ್ದರು. ಇದೀಗ ಮತ್ತೊಮ್ಮೆ ಕಪ್ಪು ವಸ್ತ್ರ ಧರಿಸಿ ಕೇಂದ್ರದ ವಿರುದ್ದ ಪ್ರತಿಭಟನೆಯಲ್ಲಿ ಗಮನಸೆಳೆದಿದ್ದಾರೆ.
ಹೆಚ್ಚುತ್ತಿರುವ ಬೆಲೆ, ನಿರುದ್ಯೋಗ ಮತ್ತು ಜಿಎಸ್‌ಟಿ ಏರಿಕೆ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧಕಾಂಗ್ರೆಸ್ ಬೃಹತ್ ಪ್ರತಿಭಟನೆ ಆಯೋಜಿಸಿದೆ . ಇದರ ಭಾಗವಾಗಿ ಭಾಗವಾಗಿ ‘ಪ್ರಧಾನಿ ನಿವಾಸಕ್ಕೆ ಮುತ್ತಿಗೆ’ ಹಾಕುವುದು ಮತ್ತು ಸಂಸತ್‌ನಿಂದ ‘ಚಲೋ ರಾಷ್ಟ್ರಪತಿ ಭವನ್’ ಮೆರವಣಿಗೆ ಆಯೋಜಿಸಲಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು ಮತ್ತು ಹಿರಿಯ ನಾಯಕರು ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಸಂಸದರು ರಾಷ್ಟ್ರಪತಿ ಭವನದವರೆಗೆ ಮೆರವಣಿಗೆ ತೆರಳಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…