ಕಪ್ ಎಲ್ಲವೂ ಬಿಜೆಪಿಯದ್ದೇ, ಆದರೆ ಸರ್ಕಾರ ಮಾತ್ರ ನಮ್ಮದು : ಡಾ.ಜಿ.ಪರಮೇಶ್ವರ್ – Vishwanews24
ಕಪ್ ಎಲ್ಲವೂ ಬಿಜೆಪಿಯದ್ದೇ, ಆದರೆ ಸರ್ಕಾರ ಮಾತ್ರ ನಮ್ಮದು : ಡಾ.ಜಿ.ಪರಮೇಶ್ವರ್
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಸಾರಿ ಕಪ್ ನಮ್ಮದೇ ಎಂದಿದ್ದ ಬಿಜೆಪಿ ಮುಖಂಡ ಆರ್.ಅಶೋಕ್ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಸದಾಶಿವನಗರದಲ್ಲಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ ಬಳಿಕ ಮಾತನಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ 130 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದ್ದು, ಕಪ್ ಎಲ್ಲವೂ ಅವರದ್ದೆ, ಆದರೆ ಸರ್ಕಾರ ಮಾತ್ರ ನಮ್ಮದು ಎಂದು ಲೇವಡಿ ಮಾಡಿದ್ದಾರೆ.
ಜಿಲ್ಲಾವಾರು ಮಾಹಿತಿ ಪಡೆದುಕೊಂಡಿದ್ದೇವೆ. ನಾವು ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತೇವೆ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಪರಮೇಶ್ವರ್ ಹೇಳಿದ್ದಾರೆ.
