ಕಾಸರಗೋಡು: ಕಬ್ಬಿಣದ ರಾಡ್ ನಿಂದ ಹೊಡೆದು ಮಗ ತಂದೆಯನ್ನು ಕೊಲೆಗೈದ ಘಟನೆ ಸೋಮವಾರ ಕಾಸರಗೋಡಿನ ಪಳ್ಳಿ ಕೆರೆ ಎಂಬಲ್ಲಿ ನಡೆದಿದೆ.
ಪಳ್ಳಿ ಕೆರೆ ಥಿಯೇಟರ್ ಸಮೀಪದ ಅಪ್ಪು ಕುಂಞಿ(65) ಕೊಲೆಯಾದ ವ್ಯಕ್ತಿ.
ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪುತ್ರ ಪ್ರಮೋದ್ (37)ನನ್ನು ಬೇಕಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುತ್ರ ಪ್ರಮೋದ್ ದಿನನಿತ್ಯ ಮನೆಯಲ್ಲಿ ತಂದೆಗೆ ಮಾನಸಿಕ ಹಿಂಸೆ, ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಅಪ್ಪು ಕುಂಞಿಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಭಾನುವಾರ ಪ್ರಮೋದ್ ತಂದೆಯ ಕೊಲೆ ಗೆತ್ನಿಸಿದ್ದಾನೆ. ಬಳಿಕ ತಂದೆ ಅಪ್ಪು ಕುಂಞಿಪೊಲೀಸರಿಗೆ ಪುನಃ ದೂರು ನೀಡಿದ್ದು, ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದರು. ನಂತರ ಸೋಮವಾರ ಸಂಜೆ ಮನೆಗೆ ತಲುಪಿದ ಪುತ್ರ ಕಬ್ಬಿಣದ ರಾಡ್ ನಿಂದ ತಂದೆಯ ತಲೆಗೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆದ ಸ್ಥಳದಲ್ಲೇ ಅಪ್ಪು ಕುಂಞಿಅವರು ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…