Featured

ಕರಾವಳಿಯನ್ನು ನಾವು ದತ್ತು ತಗೊಂಡಿದ್ದೇವೆ. ಕರ್ನಾಟಕ ಕರಾವಳಿ ನಮ್ಮದೇ: ಶೋಭಾ ಕರಂದ್ಲಾಜೆ

ಉಡುಪಿ: ರಾಹುಲ್ ಗಾಂಧಿ ಚುನಾವಣೆ ಬಂದ್ರೆ ಮಾನಸ ಸರೋವರ ಕೇದಾರ ಕೈಲಾಸ ಹೋಗ್ತಾರೆ ಉಳಿದ ದಿನಗಳಲ್ಲಿ ಚರ್ಚ್ ಗೆ ಹೋಗ್ತಾರೆ ಅದೇ ಡಿಕೆ ಶಿವಕುಮಾರ್ ಚುನಾವಣೆ ಬಂದಾಗ ದೇವಸ್ಥಾನ ತಿರುಗುತ್ತಾರೆ ಇದು ಕಾಂಗ್ರೆಸಿಗರ ನೀತಿ ಆದರೆ ದೇವರ ವಿಚಾರದಲ್ಲಿ ನಾವು ರಾಜಕೀಯ ಮಾಡುತ್ತಾ ಇಲ್ಲ ನಾವು ದೇವರ ಪರ ನಿಂತವರು ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅವರು ಸೋಮವಾರ ಉಡುಪಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು

ಹಿಂದೂ ಧರ್ಮ ಬಿಜೆಪಿಗರ ಸ್ವತ್ತಾ? ಡಿಕೆಶಿ ಪ್ರಶ್ನೆಗೆ ಶೋಭಾ ತಿರುಗೇಟು ನೀಡಿ ಹೌದು, ಖಂಡಿತವಾಗಿಯೂ ಕರಾವಳಿಯನ್ನು ನಾವು ದತ್ತು ತಗೊಂಡಿದ್ದೇವೆ. ಕರ್ನಾಟಕ ಕರಾವಳಿ ನಮ್ಮದೇ ಆಗಿದ್ದು ಉಡುಪಿಯ ಐವರು ಶಾಸಕರು ಬಿಜೆಪಿಯವರೇ ಆಗಿದ್ದು ಈ ಭಾಗವನ್ನು ದತ್ತು ತಗೊಳ್ತೇವೆ, ಅಭಿವೃದ್ಧಿನೂ ಮಾಡುತ್ತೇವೆ ಎಂದ ಅವರು, ಕಾಂಗ್ರೆಸ್ ಜನವಿರೋಧಿ ನೀತಿಗೆ ಕರಾವಳಿ ಜನ ತಕ್ಕ ಪಾಠ ಕಲಿಸಿದ್ದಾರೆ ಡಿಕೆ ಶಿವಕುಮಾರ ಯಾವ ಆಟವೂ ಕರಾವಳಿಯಲ್ಲಿ ನಡೆಯಲ್ಲ ಎಂದು ಅವರು ಹೇಳಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ ಶೋಭಾ ನಿಮಗೆ ಗೊತ್ತಿರುವ ಮಾಹಿತಿ ಮೊದಲು ಬಹಿರಂಗಪಡಿಸಿ ಅದನ್ನು ಬಿಟ್ಟು ಬುಟ್ಟಿಯಲ್ಲಿ ಹಾವಿದೆ ಹಾವಿದೆ ಎಂದು ಹೆದರಿಸುವುದನ್ನು ಬಿಡಿ. ಸಾಧ್ಯವಿದ್ದರೆ ಆ ಹಾವನ್ನು ಹೊರಗೆ ಬಿಡಿ ಈ ಪ್ರಕರಣದಲ್ಲಿ ನಿಮ್ಮ ಷಡ್ಯಂತ್ರ ಏನಾದರೂ ಇದೆಯಾ? ನಮ್ಮ ನಾಯಕರ ವಿರುದ್ಧ ಏನು ಶಡ್ಯಂತ್ರ ಮಾಡಿದ್ದೀರಿ ಮೊದಲ ಸ್ಪಷ್ಟಪಡಿಸಿ ಯಾವ ಹಾವನ್ನು ಬಿಡ್ತೀರೋ ಕಾದು ನೋಡೋಣ ಎಂದು ಹೇಳಿದರು.

ಸುಳ್ಳು ಹೇಳುವುದರಲ್ಲಿ ಯಡಿಯೂರಪ್ಪ ಮಿನಿ ಮೋದಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹೇಗೆ ಆಡಳಿತ ಮಾಡಿದ್ದಾರೆ ನೋಡಿದ್ದೇವೆ. ಅವರು ಕೋಮುಗಳನ್ನು ಒಡೆದು ಆಳುವ ನೀತಿ ಮಾಡಿದ್ದಲ್ಲದೆ ಜಾತಿ ಜಾತಿಯನ್ನು ಒಡೆಯುವ ನೀತಿ ಮಾಡಿದರು. ಅಭಿವೃದ್ಧಿಗಿಂತ ಹೆಚ್ಚಾಗಿ ಜಾತಿ ಒಡೆಯುವುದರಲ್ಲಿ ಮಗ್ನರಾಗಿದರು ನರೇಂದ್ರ ಮೋದಿ ಕೊಟ್ಟ ಅಕ್ಕಿ ಗೋಧಿ ಬಳಕೆ ಮಾಡಿಕೊಂಡರು ನಾನೇ ಅನ್ನಭಾಗ್ಯ ಯೋಜನೆ ಕೊಟ್ಟೆ ಎಂದು ಸುಳ್ಳು ಹೇಳಿದರು. ಸುಳ್ಳು ಹೇಳುವುದರಲ್ಲಿ ಯಾರಾದರೂ ನಿಪುಣರು ಇದ್ದರೆ ಅದು ಕಾಂಗ್ರೆಸ್ಸಿನವರು ಸುಳ್ಳು ಹೇಳುವುದು ಕಾಂಗ್ರೆಸ್ಸಿನ ಚಾಳಿ ಎಂದ ಶೋಭಾ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಅಥವಾ ಬೇರೆಲ್ಲೂ ಭವಿಷ್ಯವಿಲ್ಲ ಅಲ್ಲದೆ ಸಿದ್ದರಾಮಯ್ಯ ಮಾತಿಗೆ ಯಾರೂ ಬೆಲೆ ಕೊಡುವುದಿಲ್ಲ ಎಂದರು.

ವರದಿ: ಬ್ಯುರೋ ರಿಪೋರ್ಟ್-ವಿಶ್ವನ್ಯೂಸ್24

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago