ಉಡುಪಿ:ಹುದ್ದೆಗೆ ತಕ್ಕುದಾದ ಮಾತುಗಳನ್ನಾಡಿ. ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.
ಸಿಎಂ ಕುಮಾರಸ್ವಾಮಿ ಕರಾವಳಿಯನ್ನು ಉದ್ಧಾರ ಮಾಡಿಲ್ಲ ಅಂತ ಸಿಎಂ ಕುಮಾರಸ್ವಾಮಿ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ. ಕರಾವಳಿಗರಿಗೆ ತಿಳುವಳಿಕೆ ಕಡಿಮೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಕರಾವಳಿ ಅಭಿವೃದ್ಧಿಗೆ ದೇವೇಗೌಡರ ಕುಟುಂಬ ಕಾರಣ ಅಲ್ಲ ಅಂತ ವಾಗ್ದಾಳಿ ನಡೆಸಿದರು.
”ಬಜೆಟ್‍ನಲ್ಲಿ ಕರಾವಳಿಗೆ ಅನ್ಯಾಯ ಮಾಡಿದ್ದೀರಿ. ವಿಧಾನಸೌಧದ ಎದುರು ಕರಾವಳಿ ಶಾಸಕರು ಧರಣಿ ಕೂತಿದ್ದನ್ನು ಮರೆತು ಬಿಟ್ರಾ ಎಂದು ಪ್ರಶ್ನಿಸಿದ್ರು. ಅಲ್ಲದೆ ಯಾವ ಸಿಎಂ ಕೂಡ ನಿಮ್ಮಷ್ಟು ಕರಾವಳಿಯನ್ನು ಅವಹೇಳನ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಕರಾವಳಿಯ ಅಭಿವೃದ್ಧಿಗೆ ದೇವೇಗೌಡರ ಕುಟುಂಬ ಕಾರಣ ಅಲ್ಲ. ರೇವಣ್ಣ ಲೋಕೋಪಯೋಗಿ ಇಲಾಖೆಯಿಂದ ಕರಾವಳಿಗೆ ಏನು ಕೊಟ್ಟಿದ್ದೀರಿ. ಬಂದರು ಅಭಿವೃದ್ಧಿಗೆ ಸಿಎಂ ಏನು ಕೊಟ್ಟಿದ್ದೀರಿ. ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿಗರು ಬೆಲೆ ನೀಡಲ್ಲ. ನಿಮ್ಮ ಪಕ್ಷಕ್ಕೆ ವಿದ್ಯಾವಂತ ಜನರು ವೋಟ್ ಹಾಕಲ್ಲ. ಮುಂದಿನ ಚುನಾವಣೆಯಲ್ಲಿ ಜಿಡಿಎಸ್ ಅಭ್ಯರ್ಥಿಗೆ ತಕ್ಕಪಾಠ ಕಲಿಸುತ್ತಾರೆ” ಎಂದು ಗರಂ ಆದರು.
ನಿಮಗೆ ಮತ ಹಾಕಿಲ್ಲ ಅಂತ ಕರಾವಳಿ ಜನರನ್ನು ಅವಹೇಳನ ಮಾಡ್ತೀರಾ? ಹೀಗಾಗಿ ಕರಾವಳಿಗರಲ್ಲಿ ಕ್ಷಮೆ ಕೇಳಿ ಅಂತ ಒತ್ತಾಯಿಸಿದರು. ವಿಧಾನಸೌಧದ ಎದುರು ಕರಾವಳಿ ಶಾಸಕರು ಧರಣಿ ಕೂತಿದ್ದು ಮರೆತ್ರಾ? ಕರಾವಳಿಗೆ ನಿಮ್ಮ ಕೊಡುಗೆ ಏನಂತ ಮೊದಲು ಹೇಳಿ? ಉಡುಪಿ ಜನ ನಿಮ್ಮ ಮೇಲೆ ತಿರುಗಿ ಬಿದ್ದಿದ್ದಾರೆ ಅಂತ ಹರಿಹಾಯ್ದರು.
ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿಗರು ಬೆಲೆ ನೀಡಲ್ಲ. ನಿಮ್ಮ ಪಕ್ಷಕ್ಕೆ ವಿದ್ಯಾವಂತ ಜನರು ವೋಟ್ ಹಾಕಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ತಕ್ಕಪಾಠ ಕಲಿಸ್ತಾರೆ ಅಂತ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…