Featured

ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ: ಸಿಎಂ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ:ಹುದ್ದೆಗೆ ತಕ್ಕುದಾದ ಮಾತುಗಳನ್ನಾಡಿ. ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.

ಸಿಎಂ ಕುಮಾರಸ್ವಾಮಿ ಕರಾವಳಿಯನ್ನು ಉದ್ಧಾರ ಮಾಡಿಲ್ಲ ಅಂತ ಸಿಎಂ ಕುಮಾರಸ್ವಾಮಿ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ. ಕರಾವಳಿಗರಿಗೆ ತಿಳುವಳಿಕೆ ಕಡಿಮೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಕರಾವಳಿ ಅಭಿವೃದ್ಧಿಗೆ ದೇವೇಗೌಡರ ಕುಟುಂಬ ಕಾರಣ ಅಲ್ಲ ಅಂತ ವಾಗ್ದಾಳಿ ನಡೆಸಿದರು.

”ಬಜೆಟ್‍ನಲ್ಲಿ ಕರಾವಳಿಗೆ ಅನ್ಯಾಯ ಮಾಡಿದ್ದೀರಿ. ವಿಧಾನಸೌಧದ ಎದುರು ಕರಾವಳಿ ಶಾಸಕರು ಧರಣಿ ಕೂತಿದ್ದನ್ನು ಮರೆತು ಬಿಟ್ರಾ ಎಂದು ಪ್ರಶ್ನಿಸಿದ್ರು. ಅಲ್ಲದೆ ಯಾವ ಸಿಎಂ ಕೂಡ ನಿಮ್ಮಷ್ಟು ಕರಾವಳಿಯನ್ನು ಅವಹೇಳನ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಕರಾವಳಿಯ ಅಭಿವೃದ್ಧಿಗೆ ದೇವೇಗೌಡರ ಕುಟುಂಬ ಕಾರಣ ಅಲ್ಲ. ರೇವಣ್ಣ ಲೋಕೋಪಯೋಗಿ ಇಲಾಖೆಯಿಂದ ಕರಾವಳಿಗೆ ಏನು ಕೊಟ್ಟಿದ್ದೀರಿ. ಬಂದರು ಅಭಿವೃದ್ಧಿಗೆ ಸಿಎಂ ಏನು ಕೊಟ್ಟಿದ್ದೀರಿ. ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿಗರು ಬೆಲೆ ನೀಡಲ್ಲ. ನಿಮ್ಮ ಪಕ್ಷಕ್ಕೆ ವಿದ್ಯಾವಂತ ಜನರು ವೋಟ್ ಹಾಕಲ್ಲ. ಮುಂದಿನ ಚುನಾವಣೆಯಲ್ಲಿ ಜಿಡಿಎಸ್ ಅಭ್ಯರ್ಥಿಗೆ ತಕ್ಕಪಾಠ ಕಲಿಸುತ್ತಾರೆ” ಎಂದು ಗರಂ ಆದರು.

ನಿಮಗೆ ಮತ ಹಾಕಿಲ್ಲ ಅಂತ ಕರಾವಳಿ ಜನರನ್ನು ಅವಹೇಳನ ಮಾಡ್ತೀರಾ? ಹೀಗಾಗಿ ಕರಾವಳಿಗರಲ್ಲಿ ಕ್ಷಮೆ ಕೇಳಿ ಅಂತ ಒತ್ತಾಯಿಸಿದರು. ವಿಧಾನಸೌಧದ ಎದುರು ಕರಾವಳಿ ಶಾಸಕರು ಧರಣಿ ಕೂತಿದ್ದು ಮರೆತ್ರಾ? ಕರಾವಳಿಗೆ ನಿಮ್ಮ ಕೊಡುಗೆ ಏನಂತ ಮೊದಲು ಹೇಳಿ? ಉಡುಪಿ ಜನ ನಿಮ್ಮ ಮೇಲೆ ತಿರುಗಿ ಬಿದ್ದಿದ್ದಾರೆ ಅಂತ ಹರಿಹಾಯ್ದರು.

ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿಗರು ಬೆಲೆ ನೀಡಲ್ಲ. ನಿಮ್ಮ ಪಕ್ಷಕ್ಕೆ ವಿದ್ಯಾವಂತ ಜನರು ವೋಟ್ ಹಾಕಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ತಕ್ಕಪಾಠ ಕಲಿಸ್ತಾರೆ ಅಂತ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago