Featured

ಕರಾವಳಿಯಲ್ಲಿ ಇಂದಿನಿಂದ ಕೋವಿಡ್‌ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ಕೆ ಚಾಲನೆ – Vishwanews24

ಕರಾವಳಿಯಲ್ಲಿ ಇಂದಿನಿಂದ ಕೋವಿಡ್‌ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ಕೆ ಚಾಲನೆ – Vishwanews24

ಮಂಗಳೂರು: ಕರಾವಳಿಯಲ್ಲಿ ಇಂದಿನಿಂದ ಕೋವಿಡ್‌ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ಕೆ ಚಾಲನೆ ದೊರಕಿದೆ. ವೆನ್ಲಾಕ್ ನ ಆಯುಷ್ ವಿಭಾಗದಲ್ಲಿ ಜ.10ರ ಸೋಮವಾರ ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಮುನ್ನೆಚ್ಚರಿಕಾ ಡೋಸ್ ವಿತರಣೆಗೆ ಚಾಲನೆ ನೀಡಿದರು.

ಲಸಿಕೆ ಪಡೆದ ಅರ್ಹರಿಗೆ ಇದೇ ವೇಳೆ ಸಚಿವರು ಗುಲಾಬಿ ಹೂವು ನೀಡಿ ಅಭಿನಂದಿಸಿದರು.

ಬೂಸ್ಟರ್ ಡೋಸ್ ಲಸಿಕಾಕರಣದ ಅಂಗವಾಗಿ ಆರೋಗ್ಯ ಸಿಬ್ಬಂದಿ, ಕೋವಿಡ್ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ವೃದ್ದರು ಮುನ್ನೆಚರಿಕಾ ಡೋಸ್ ಲಸಿಕಾಕರಣದಲ್ಲಿ ಭಾಗಿಯಾಗಿ ಲಸಿಕೆಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ದ.ಕ ಜಿಲ್ಲೆಯಲ್ಲಿ 3,37,447 ಫಲಾನುಭವಿಗಳಿಗೆ ಲಸಿಕೆ ನಿಡುವ ಗುರಿ ಇರಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 52,523 ಆರೋಗ್ಯ ಕಾರ್ಯಕರ್ತರು ಹಾಗೂ 15,924 ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟ 2,69,000 ಮಂದಿ ಫಲಾನುಭವಿಗಳಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago