ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದ್ದು, ಮೊದಲ ದಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.
ನಿನ್ನೆಯೂ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದ್ದು, ಬೆಂಗಳೂರಿನಲ್ಲಿ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ಭಾರೀ ಮಳೆ
ತಮಿಳುನಾಡಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಅಂತ್ಯ ಕಾಣುವ ಲಕ್ಷಣಗಳೇ ಕಾಣುತ್ತಿಲ್ಲ. ಇಂದು ಕೂಡ ಭಾರೀ ಮಳೆಯಿಂದಾಗಿ ಕುನ್ನೂರು ಮತ್ತು ಕೋಟಗಿರಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…