ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ  : ಹವಾಮಾನ ಇಲಾಖೆ ಮುನ್ಸೂಚನೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ

ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ  : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಏಪ್ರಿಲ್ 18ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದೆ. ಕೊಡಗು ಜಿಲ್ಲೆಯ ಕೆಲವೆಡೆ ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ ಹಾಗೂ ಬೆಂಗಳುರಿನ ವಿವಿಧೆಡೆ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮಲ್ಪೆ :ಅಗ್ನಿ ಅವಘಡ ; ಹೋಟೆಲ್ ಸಂಪೂರ್ಣ ಭಸ್ಮ – vishwanews24

Leave a Reply