ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಉಪವಾಸ ಆರಂಭ – Vishwanews24
ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಉಪವಾಸ ಆರಂಭ
ಮಂಗಳೂರು: ಪವಿತ್ರ ರಮಝಾನ್ನ ಪ್ರಥಮ ಚಂದ್ರದರ್ಶನವು ಬುಧವಾರ ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ. ಈ ಹಿನ್ನೆಲೆಯಲ್ಲಿ ರಂಜಾನ್ ಉಪವಾಸ ಆರಂಭಿಸಲು ಸೂಚಿಸಲಾಗಿದೆ.
ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್ ಹಾಜಿ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಮತ್ತು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಜಲ್ ಅಲ್ ಬುಖಾರಿ ಹಾಗೂ ಭಟ್ಕಳ ಚಂದ್ರದರ್ಶನ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
