Mumbai: Vehicles ply on a waterlogged street during rain, at King's circle in Mumbai, Friday, July 3, 2020. (PTI Photo/Shashank Parade)(PTI03-07-2020_000101A)
ಮಂಗಳೂರು: ಕರಾವಳಿ ಭಾಗದ ಕೆಲವು ಪ್ರದೇಶದಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿಯಲ್ಲಿ ಏ.೭ ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದಲ್ಲದೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ದಾಖಲಾಗಿದೆ. ಇದೇ ರೀತಿ ಬುಧವಾರದಿಂದ ಮುಂದಿನ ಐದು ದಿನವು ಬರಲಿದೆ.
ಐದು ದಿನಗಳ ಪೈಕಿ ಏಪ್ರಿಲ್ 8ರವರೆಗೆ ಕರಾವಳಿ ಭಾಗದಲ್ಲಿ ಮಳೆ ತುಸು ಬಿರುಸುಕೊಳ್ಳಲಿದೆ. ಇದನ್ನು ಬಿಟ್ಟರೆ ದಕ್ಷಿಣ ಒಳನಾಡಿನ ಭಾಗದಲ್ಲಿ ಹಗುರ ಇಲ್ಲವೇ ಸಾಧಾರಣವಾಗಿ ಮಳೆ ಬರಬಹುದು.
ಶುಕ್ರವಾರ ಮಳೆ ಸುರಿಸುವ ಮಾರುತಗಳು ಹೆಚ್ಚು ಚುರುಕಾಗಿರಲಿವೆ. ಹೀಗಾಗಿ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…