ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ ; ಇಂದು, ನಾಳೆ ಎಲ್ಲೋ ಅಲರ್ಟ್‌ – vishwanews24

Featured, ಉಡುಪಿ, ದಕ್ಷಿಣ ಕನ್ನಡ

ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ ; ಇಂದು, ನಾಳೆ ಎಲ್ಲೋ ಅಲರ್ಟ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್‌’ ಘೋಷಣೆ ಮಾಡ ಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

 

Leave a Reply