ಉಡುಪಿ

ಕರಾವಳಿಯಲ್ಲಿ ಭಾರಿ ಸದ್ದು ಮಾಡ್ತಿದೆ #EducationInTulu ಅಭಿಯಾನ..! Vishwanews24

ಕರಾವಳಿಯಲ್ಲಿ ಸದ್ದು ಮಾಡ್ತಿದೆ #EducationInTulu ಟ್ರೆಂಡ್..! ಏನಿದು ಹ್ಯಾಶ್‌ಟ್ಯಾಗ್ ಅಭಿಯಾನ?

ಮಂಗಳೂರು: ನಮ್ಮ ರಾಜ್ಯದಲ್ಲಿ ಕನ್ನಡ ಬಿಟ್ಟರೆ ಅತೀ ಹೆಚ್ಚಾಗಿ ಬಳಸಲ್ಪಡುವ ಭಾಷೆ ತುಳು. ಆದರೆ ತುಳು ಭಾಷೆಗೆ ಇನ್ನೂ ಸಾಂವಿಧಾನಿಕ ಸ್ಥಾನಮಾನ ಇನ್ನೂ ಸಿಕ್ಕಿಲ್ಲ. ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಕಳೆದ ಹಲವು ವರ್ಷಗಳಿಂದ ಅನೇಕ ಹೋರಾಟಗಳು, ಅಭಿಯಾನಗಳು ನಡೆಯುತ್ತಾ ಬಂದಿವೆ.

ಈಗ ಕೇಂದ್ರ ಸರಕಾರದ ಹೊಸ ಶಿಕ್ಷಣ ನೀತಿ ಪ್ರಕಾರ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಲು ಆದ್ಯತೆಯ ಅವಕಾಶ ನೀಡಿದ್ದು ಈ ಹಿನ್ನಲೆ ಇದೀಗ ತುಳುನಾಡಿನ ಮಕ್ಕಳಿಗೆ ತುಳುವಿನಲ್ಲಿಯೇ ಶಿಕ್ಷಣ ಸಿಗಬೇಕು ಎಂಬ ಅಭಿಯಾನವೊಂದನ್ನು ನಡೆಸಲು ತುಳುವರು ತೀರ್ಮಾನಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ತುಳುಪರ ಕಾರ್ಯಕ್ರಮಗಳನ್ನು ಮಾಡಿ ಮೆಚ್ಚುಗೆ ಗಳಿಸಿರುವ ಜೈ ತುಳುನಾಡ್ ಸಂಘಟನೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಸುವ ಅಭಿಯಾನದ ನೇತೃತ್ವ ವಹಿಸಿಕೊಂಡಿದೆ. ಅಲ್ಲದೆ ಈಗಾಗಲೇ ಜನರಲ್ಲಿ ಈ ಬಗ್ಗೆ ಜಾಗೃತಿ ಕೂಡ ಮೂಡಿಸಲು ಆರಂಭಿಸಿದೆ. ಇದೇ ಆಗಸ್ಟ್ 16ರಂದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಕ್ಯಾಂಪೇನ್ ನಡೆಸಲು ತುಳುವರು ನಿರ್ಧರಿಸಿದ್ದಾರೆ.

ಈ ಹಿಂದೆ ತುಳುಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ರಾಜ್ಯ ಭಾಷೆಯನ್ನಾಗಿ ಘೋಷಣೆ ಮಾಡಬೇಕು. ಹಾಗೂ ತುಳು ಲಿಪಿಯನ್ನು ಸಾರ್ವಜನಿಕರಿಗೆ ಕಲಿಸುವಂತಹ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಇದೇ ಸಂಘಟನೆ ಹಮ್ಮಿಕೊಂಡಿತ್ತು. ಈ ಮೂಲಕ ತುಳುವರ ಪರ ಕಾರ್ಯಕ್ರಮಗಳನ್ನು ಮಾಡಿ ಜನಮನ್ನಣೆ ಗಳಿಸಿದೆ.

ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ನಿರ್ಧರಿಸಿದೆ. ಈ ಹೊಸ ಶಿಕ್ಷಣ ನೀತಿಯಲ್ಲಿ 5ನೇ ತರಗತಿಯವರೆಗೆ ಆಯಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ಕೊಡಬೇಕು ಎಂಬ ನಿಯಮವಿದೆ. ಇದರ ಅನ್ವಯ ತುಳುನಾಡಿನ ಮಕ್ಕಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂಬ ನಿಯಮ ಸೇರಿಸಬೇಕು ಎಂಬುದು ಕರಾವಳಿ ಜನರ ಮಹತ್ತರವಾದ ಆಶಯವಾಗಿದೆ.

ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಬಳಿ ತುಳುವನ್ನು ಹೊಸ ಶಿಕ್ಷಣ ನೀತಿಯಲ್ಲಿ ಸೇರಿಸುವ ಬಗ್ಗೆ ಮನವಿ ಮಾಡಬೇಕಾಗಿದ್ದು, ಈ ಮೂಲಕ ಸರ್ಕಾರದ ಗಮನ ಸೆಳೆಯುವ ಅಗತ್ಯತೆ ಇದೆ. ಹೀಗಾಗಿ ತುಳು ಅಭಿಮಾನಿಗಳು ಪಾಲ್ಗೊಂಡು #EducationInTulu ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಟ್ವೀಟ್ ಮಾಡಿ ಜನಪ್ರತಿನಿಧಿಗಳು ಹಾಗೂ ಸರ್ಕಾರವನ್ನು ಎಚ್ಚರಿಸಲು ಈ ಅಭಿಯಾನ ನಡೆಸಲು ಸಂಘಟನೆ ನಿರ್ಧರಿಸಿದೆ.

ಇದೇ ಆಗಸ್ಟ್ 16ರಂದು ಟ್ವೀಟ್ ಅಭಿಯಾನ ಆಯೋಜಿಸಲಾಗಿದೆ. ಈ ಅಭಿಯಾನದಲ್ಲಿ ತುಳು ಭಾಷಾಪ್ರೇಮಿಗಳು ಪಾಲ್ಗೊಳ್ಳುವಂತೆ ಜೈ ತುಳುನಾಡ್ ಸಂಘಟನೆ ವಿನಂತಿಸಿಕೊಂಡಿದ್ದು, #EducationInTulu ಅನ್ನುವ ಹ್ಯಾಷ್‌ಟ್ಯಾಗ್‌ನಲ್ಲಿ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತೆ ಸರ್ಕಾರವನ್ನು ಜನರು ಎಚ್ಚರಿಸಬೇಕೆಂದು ತಿಳಿಸಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

19 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

20 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

22 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

23 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

23 hours ago