ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ : ಆಗಸ್ಟ್ 9ರವರೆಗೆ ಮೀನುಗಾರಿಕೆ ನಿಷೇಧ -Vishwanews24
ಮಂಗಳೂರು: ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.
ಇಂದು ಸಂಜೆಯಿಂದ ನಾಳೆ ರಾತ್ರಿಯವರೆಗೂ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಈ ಸಂದರ್ಭ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ನಾಳೆಯಿಂದ ಆಗಸ್ಟ್ 9ರವರೆಗೂ ಆರೆಂಜ್ ಅಲರ್ಟ್ ಘೋಷಿಸಿದ್ದು ಈ ಎಲ್ಲಾ ದಿನದಲ್ಲಿ ಕರಾವಳಿಯಾದ್ಯಂತ ಮೀನುಗಾರಿಕೆ ಸಂಪೂರ್ಣವಾಗಿ ನಿಷೇಧಿಸಲು ಸೂಚಿಸಿದೆ.
ಸಮುದ್ರ ಹಾಗೂ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ಮೀನುಗಾರರು ಮೀನುಗಾರಿಕೆ ನಡೆಸದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಚಿಕ್ಕಮಗಳೂರು- ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಗುಡ್ಡ ಕುಸಿತವಾಗಿದೆ.
