ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24
ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.
ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಚ್ಚಿಲ: ತ್ಯಾಜ್ಯ ಸಂಗ್ರಹದ ವಾಹನ ಢಿಕ್ಕಿ: ಬೈಕ್ ಸವಾರನಿಗೆ ಗಾಯ – vishwanews24
