ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ತಗ್ಗಿದ ಮಳೆ ಮತ್ತೆ ಪ್ರಾರಂಭವಾಗಿದೆ. ಮಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಅಲ್ಲದೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ಇರುವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಒಂದು ವಾರ ನೈಋುತ್ಯ ಮಾನ್ಸೂನ್ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಬೆಳಗಾವಿ ,ಬೀದರ್, ಕಲಬುರ್ಗಿ, ವಿಜಯಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 20 ರವರೆಗೂ ಭಾರಿ ಮಳೆ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೆ ಯೆಲ್ಲೋ ಅಲರ್ಟ್ ಇದ್ದು, ನಂತರ ಮಳೆಯ ತೀವ್ರತೆ ಹೆಚ್ಚಾಗುವ ಮುನ್ಸೂಚನೆ ಇದ್ದು, ಆಗಸ್ಟ್ 18, 19 ಹಾಗೂ 20 ರಂದು ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ಕೊಡಲಾಗಿದೆ. ಆಗಸ್ಟ್ 14 ಹಾಗೂ 15 ರಂದು ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗುವ ಅಲರ್ಟ್ ಕೊಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…