Featured

ಕರಾವಳಿಯಲ್ಲಿ ಮತ್ತೆ ವರುಣನ ಅಬ್ಬರ ; ಭಾರೀ ಮಳೆಯಿಂದಾಗಿ ಹಲವೆಡೆ ನೆರೆ ಭೀತಿ

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಹವಾಮಾನ ಬದಲಾಗಿ ಮತ್ತೆ ಕರಾವಳಿಯಲ್ಲಿ ವರುಣ ಅಬ್ಬರಿಸಲು ಆರಂಭಿಸಿದ್ದಾನೆ.

ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದ್ದು, ಕರಾವಳಿಯಲ್ಲಿ 35 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮಹಾಮಳೆ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳೂರು, ಸುರತ್ಕಲ್, ಕಾಪು, ಮುಲ್ಕಿ, ವೇಣೂರು, ನಾರಾವಿ ಭಾಗದಲ್ಲೂ ರಾತ್ರಿಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಮಾತ್ರವಲ್ಲ, ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯಾ, ಶಿರಾಡಿ, ಸುಬ್ರಹ್ಮಣ್ಯ ಸೇರಿದಂತೆ ಘಟ್ಟದ ತಪ್ಪಲಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಗುಂಡ್ಯ ಸಮೀಪದ ಉದನೆ ಎಂಬಲ್ಲಿ ಹೊಳೆ ತುಂಬಿ ಹರಿಯುತ್ತಿದ್ದು, ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೇತುವೆಯಲ್ಲಿ ಕೃತಕ ನೆರೆ ಉಂಟಾಗಿದೆ. ಬೆಳ್ತಂಗಡಿ , ಸುಳ್ಯ ಭಾಗದಲ್ಲಿ ಹಲವೆಡೆ ಕೃಷಿ ಜಮೀನಿಗೆ ಮಳೆ ನೀರು ನುಗ್ಗಿದೆ. ಗ್ರಾಮೀಣ ಭಾಗದ ಕೆಲ ಮನೆಗಳಿಗೆ ನೆರೆ ನೀರು ಆವರಿಸಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆ ಕಳೆದ 24 ಗಂಟೆಯಿಂದ ಮುಳುಗಡೆಯಾಗಿದೆ.

ಕುಮಾರಧಾರಾ ಮತ್ತು ನೇತ್ರಾವತಿ ನದಿಯೂ ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದೆ. ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿರುವುದರಿಂದ ಶ್ರೀ ಕ್ಷೇತ್ರದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಪರಿಣಾಮ, ಯಾತ್ರಿಕರು ಸಂಕಷ್ಟ ಪಡುವಂತಾಗಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆಯಲ್ಲಿರುವಂತೆ ಸೂಚಿಸಲಾಗಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago