Featured

ಕರಾವಳಿಯಲ್ಲಿ ಮಳೆಯ ಅಬ್ಬರ – ಜೂನ್ 25ರವರೆಗೆ ರೆಡ್ ಅಲರ್ಟ್ ಘೋಷಣೆ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ – Vishwanews24

ಕರಾವಳಿಯಲ್ಲಿ ಮಳೆಯ ಅಬ್ಬರ..

ಜೂನ್ 25ರವರೆಗೆ ರೆಡ್ ಅಲರ್ಟ್ ಘೋಷಣೆ ..

ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ.ತಲುಪುವ ಸಾಧ್ಯತೆ..

ಮುಂದಿನ 24 ಗಂಟೆಗಳ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..

ಉಡುಪಿ  / ದ. ಕ. : ಕಳೆದ ಕೆಲ ದಿನಗಳಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ಮುಂಜಾಗೃತಾ ಕ್ರಮವಾಗಿ ಇಂದಿನಿಂದ ಜೂನ್ 25ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೆಲವೆಡೆ ಕೃತಕ ನೆರೆ ಉಂಟಾಗಿದ್ದು, ಮತ್ತೆ ಕೆಲವೆಡೆ ಹಳ್ಳಿಗಳು ಜಲಾವೃತಗೊಂಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ.ತಲುಪುವ ಸಾಧ್ಯತೆಯಿದ್ದು, ಮುಂಜಾಗೃತಾ ಕ್ರಮವಾಗಿ ಮುಂದಿನ 24 ಗಂಟೆಗಳ ವರೆಗೆ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಕರಾವಳಿಯ ಕಡಲತೀರಗಳಿಗೆ, ಜಲಪಾತಗಳಿಗೆ ಭೇಟಿ ನೀಡದಂತೆ ಈಗಾಗಲೇ ಜಿಲ್ಲಾಡಳಿತ ಸೂಚಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣ ಮತ್ತು ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

24 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

36 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

50 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

1 hour ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago