ಉಡುಪಿ: ನಗರದಲ್ಲಿ ಮಳೆ ಬಿರುಗಾಳಿಯ ವಾತಾವರಣ ಇದೆ. ಅದರಲ್ಲೂ ಕಡಲ ತೀರದ ಪ್ರದೇಶಗಳಲ್ಲಿ ಮಳೆಯ ಜೊತೆ ಗಾಳಿಯ ತೀವ್ರತೆ ಜೋರಾಗಿದೆ. ಪೂರ್ವ ಮುಂಗಾರು ಆಗಮನ ಸೂಚನೆ ಸಿಕ್ಕಿದೆ. ಕಡಲಲ್ಲಿ ಕಡಲ ಅಲೆಗಳು ಮತ್ತು ಚಂಡಮಾರುತದ ಅಬ್ಬರ ಜೋರಾಗಿದೆ. ಕಳೆದ ಒಂದು ವಾರದಿಂದ ಉಡುಪಿ ಯಲ್ಲಿ ಭಾರೀ ಮಳೆಯಾಗುತ್ತಿದೆ.
ಸದ್ಯ ಜಿಲ್ಲೆಯಲ್ಲಿ ನಿರಂತರವಾಗಿ ಕಾಪು ಹೆಬ್ರಿ ,ಬೈಂದೂರು ಕಾರ್ಕಳ, ಉಡುಪಿ ಮುಂಜಾನೆ ,ಸಂಜೆ ವೇಳೆ ಮಳೆ ಸುರಿಯುತ್ತಿದೆ. ಕಳೆದ ವರ್ಷದ ಮಳೆಗಾಲಕ್ಕೆ ಹೋಲಿಸಿದರೆ ಈ ವರ್ಷ ಮಳೆಗಾಲದ ಸಿದ್ಧತೆ ಬೇಗನೇ ಸಿದ್ದರಾಗುವಂತೆ ಮಾಡಿದೆ. ಮತ್ತೊಂದೆಡೆ ಗಂಟೆಗೆ 55 ರಿಂದ 60 ಕಿಲೋಮೀಟರ್ ವೇಗದ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.
ಕಡಲ ತೀರದ ನಿವಾಸಿಗಳು ಜಾಗೃತೆಯಿಂದ ಇರುವಂತೆ ಸೂಚಿಸಲಾಗಿದೆ. ಮಳೆ ಜೊತೆ ಈ ಬಾರಿ ಗಾಳಿ ಅಬ್ಬರಿಸುತ್ತಿರುವುದು ಆತಂಕ ಮೂಡಿಸಿದೆ. ಅಲ್ಲದೆ ಸಮುದ್ರ ತೀರದ ನಿವಾಸಿಗಳಿಗೆ ಸಮುದ್ರ ನೋಡಲು ಬಂದ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಸಮುದ್ರ ತೀರದ ನಿವಾಸಿಗಳಿಗೆ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆಯನ್ನು ಸಹ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…