ದಕ್ಷಿಣ ಕನ್ನಡ

ಕರಾವಳಿಯಲ್ಲಿ ಮೋದಿ ಪ್ರಚಾರ..

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಬಿಜೆಪಿಯ ಹೈಕಮಾಂಡ್ ಪ್ರಚಾರ ತಂತ್ರ ರೂಪಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕರೆ ತರಲು ಸಜ್ಜಾಗಿದೆ.

ರಾಜ್ಯದಲ್ಲಿ 16 ಚುನಾವಣಾ ರ‌್ಯಾಲಿಗಳಲ್ಲಿ ಪ್ರಧಾನಿ ಮಾತನಾಡಲಿದ್ದಾರೆ. ಅದರಂತೆ ಮೇ 8ರಂದು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಏಪ್ರಿಲ್ 29ರಿಂದ ಅವರು ರಾಜ್ಯದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಕೋಲಾರ ಹಾಗೂ ರಾಯಚೂರಿನಲ್ಲಿ 29, ಮೇ 1ರಂದು ಬಳ್ಳಾರಿ ಹಾಗೂ ಬೆಳಗಾವಿ, 3ರಂದು ಚಾಮರಾಜನಗರ ಹಾಗೂ ಉಡುಪಿ, 5ರಂದು ಜಮಖಂಡಿ, 6ರಂದು ಹುಬ್ಬಳ್ಳಿ ಹಾಗೂ ಕಲಬುರ್ಗಿ, 7ರಂದು ಶಿವಮೊಗ್ಗ ತುಮಕೂರು ಮತ್ತು 8ರಂದು ಮಂಗಳೂರು, ಬೆಂಗಳೂರಿನಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ.

ಆದರೆ ಜಿಲ್ಲಾ ಬಿಜೆಪಿ ನಾಯಕರ ಪ್ರಕಾರ ಆಯ್ದ 4-5 ವಿಧಾನಸಭಾ ಕ್ಷೇತ್ರಗಳ ಪ್ರಮುಖ ಭಾಗಗಳಲ್ಲಿ ಮೋದಿ ರೋಡ್ ಶೋ ನಡೆಸುವ ಸಾಧ್ಯತೆ ಇದೆ. ಸಾರ್ವಜನಿಕ ಸಭೆಯಾದರೆ ಹೆಚ್ಚು ಜನರನ್ನು ಸೇರಿಸುವ, ಹೆಚ್ಚಿನ ಭದ್ರತೆ ವ್ಯವಸ್ಥೆ ಮಾಡುವ ಸವಾಲು ಇರುತ್ತದೆ, ರೋಡ್ ಶೋದಲ್ಲಿ ಜನರನ್ನು ನೇರವಾಗಿ ತಲಪುವ ಸಾಧ್ಯತೆ ಹೆಚ್ಚು ಎಂಬ ಕಾರಣಕ್ಕೆ ಇದಕ್ಕೆ ಒತ್ತು ನೀಡಬಹುದು. ಆದರೆ ಜಿಲ್ಲಾ ಬಿಜೆಪಿ ನಾಯಕರಿಗೆ ಅಧಿಕೃತವಾದ ಯಾವುದೇ ಕಾರ್ಯಕ್ರಮ, ವೇಳಾಪಟ್ಟಿ ಲಭ್ಯವಾಗಿಲ್ಲ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

1 hour ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago