Featured

ಕರಾವಳಿಯಲ್ಲಿ ಲೈಟ್ ಫಿಶಿಂಗ್ ಮೀನುಗಾರಿಕೆ ನಿಷೇಧ – Vishwanews24

ಮಂಗಳೂರು : ಕರ್ನಾಟಕದ ಕರಾವಳಿಯ ಆಳ ಸಮುದ್ರದಲ್ಲಿ ಲೈಟ್ ಫಿಶಿಂಗ್ ಮೀನುಗಾರಿಕೆಯನ್ನು ನಿಷೇಧಿಸಿದ ಕೇಂದ್ರ ಸರಕಾರದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಕೇರಳ, ಕರ್ನಾಟಕ, ಗೋವಾ ಮತ್ತು ಮಹರಾಷ್ಟ್ರದಲ್ಲಿ ದೊಡ್ಡ ದೊಡ್ಡ ಮೀನುಗಾರಿಕಾ ಬೋಟ್ ಗಳಿಗೆ ಎಲ್ ಇಡಿ ಲೈಟ್ ನ್ನು ಬಳಸಿ ಮೀನುಗಾರಿಕೆ ನಡೆಸಲಾಗುತ್ತಿತ್ತು, ಇದರಿಂದಾಗಿ ಮೀನು ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದ ಕಾರಣ ಕೇಂದ್ರ ಸರಕಾರ 2017ರಲ್ಲಿ ಲೈಟ್ ಫಿಶಿಂಗ್ ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು.

ಆದರೆ ಉಡುಪಿಯ ಮಲ್ಪೆ ಬಂದರಿನ ಅಖಿಲ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘ ಲೈಟ್ ಫಿಶಿಂಗ್ ಬ್ಯಾನ್ ಮಾಡಿದ ಕೇಂದ್ರ ಸರಕಾರದ ನಿರ್ಧಾರ ಏಕಪಕ್ಷೀಯವಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿ ಯಾಂತ್ರಿಕೃತ ದೋಣಿ ಖರೀದಿಸಿ ಬೆಳಕು ಬಳಸಿ ಮೀನುಗಾರಿಕೆ ಮಾಡಲಾಗುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ಮೀನುಗಾರಿಕೆಯನ್ನೇ ಅವಲಂಬಿಸಿರುವ ಕುಟುಂಬಗಳಿಗೆ ತೊಂದರೆ ಆಗಿದೆ ಎಂದು ಹೈಕೋರ್ಟ್ ನಲ್ಲಿ ಮೀನುಗಾರರ ಪರ ವಕೀಲರು ವಾದ ಮಂಡಿಸಿದ್ದರು.

ವಿಚಾರಣೆ ವೇಳೆ ಕೇಂದ್ರ ಸರಕಾರದ ಪರ ವಾದ ಮಂಡಿಸಿದ ವಕೀಲೆ ಎಂ.ಸಿ ನಾಗಶ್ರೀ , ಎಲ್‌ಇಡಿ, ಹಾಲೋಜನ್‌ ಮತ್ತಿತರ ಬೆಳಕು ಬಳಸಿ ಸಮುದ್ರದಾಳದಲ್ಲಿ ಯಾಂತ್ರೀಕೃತ ದೋಣಿಗಳ ಮೂಲಕ ಮೀನುಗಾರಿಕೆ ಮಾಡಲಾಗುತ್ತಿದೆ. ಇದರಿಂದ ಅಪರೂಪದ ಮೀನಿನ ಸಂತತಿ ಮತ್ತು ಮೀನು ಮರಿಗಳನ್ನೂ ಸಹ ಹಿಡಿಯಲಾಗುತ್ತಿತ್ತು. ಇದು ಮೀನುಗಳ ಉತ್ಪತ್ತಿ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರದ ಕ್ರಮವನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.

ಈ ಹಿನ್ನಲೆಯಲ್ಲಿ ಹೈಕೋರ್ಟ್ ಈ ಪ್ರಕರಣವನ್ನು ವಿಲೇವಾರಿ ಮಾಡಿದ್ದು, ಕೇಂದ್ರ ಸರಕಾರದ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಲೈಟ್ ಫಿಶಿಂಗ್ ನಿಷೇಧಿಸಲಾಗಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago