ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ ; ರಸ್ತೆಗಳು ಜಲಾವೃತ
ಉಡುಪಿ /ಮಂಗಳೂರು: ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದ್ದು ರಸ್ತೆಗಳೆಲ್ಲ ಜಲಾವೃತಗೊಂಡಿವೆ.
ಉಡುಪಿಯ ಕುಂದಾಪುರ, ಕಾರ್ಕಳ, ಹೆಬ್ರಿ ಭಾಗಗಳಲ್ಲಿ ಮಳೆಯಾಗುತ್ತಿದ್ದು ಬೈಂದೂರು ತಾಲೂಕಿನ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಅಲ್ಲದೆ ಕಾರವಾರ ಸಂಪರ್ಕ ಹೆದ್ದಾರಿಯ ರಾಘವೇಂದ್ರ ಮಠದ ಪಕ್ಕದಲ್ಲಿಯೂ ಗುಡ್ಡ ಕುಸಿದಿದೆ.
ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲಿ ಅಬ್ಬರದ ಮಳೆಯಾಗುತ್ತಿದ್ದರೂ ಶಿಕ್ಷಣಾಧಿಕಾರಿ ಶಾಲೆಗೆ ರಜೆ ನೀಡದೆ ಇರುವುದು ಸ್ಥಳೀಯರ ವಿರೋಧಕ್ಕೆ ಕಾರಣವಾಗಿದೆ. ಜಿಲ್ಲಾಧಿಕಾರಿ ರಜೆಯ ವಿಷಯವನ್ನು ತಾಲೂಕು ಶಿಕ್ಷಣಾಧಿಕಾರಿಗಳಿಗೆ ವಹಿಸಿದ್ದಾರೆ ಎನ್ನಲಾಗಿದೆ.
