ಕರಾವಳಿಯಲ್ಲಿ ಹಿಂದೂಗಳನ್ನು ನಿರ್ಲಕ್ಷ್ಯಿಸಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ: ಜೆಡಿಎಸ್ ಎಂಎಲ್ ಸಿ ಭೋಜೇಗೌಡ
ಮಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಕರಾವಳಿಯಲ್ಲಿ ಹಿಂದೂಗಳನ್ನು ಕಡೆಗಣಿಸಿದ್ದೇ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣವಾಯ್ತು ಎಂದು ಜೆಡಿಎಸ್ ಎಂ ಎಲ್ ಸಿ ಎಸ್.ಎಲ್ ಭೋಜೇಗೌಡ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2013ರ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಿತ್ತು. ಆದರೆ ಈಗ ಹೀನಾಯವಾಗಿ ಸೋತಿದೆ,ಈ ಚುನಾವಣೆಯಲ್ಲಿ ಹಿಂದೂಗಳ ಮತಗಳು ಎಲ್ಲಿ ಹೋದವು ಎಂಬುದನ್ನು ಪಕ್ಷ ತಿಳಿಯಬೇಕು ಎಂದು ಹೇಳಿದ್ದಾರೆ.
ಐದು ವರ್ಷಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ನಡೆದ ಬೆಳವಣಿಗಗಳು ಹಿಂದೂಗಳ ಮತ ಧ್ರುವೀಕರಣಕ್ಕೆ ಕಾಕಣವಾಯ್ತು, ಹೀಗಾಗಿ ಅದು ಕಾಂಗ್ರೆಸ್ ಸೋಲಿಗೆ ಕಾರಣವಾಯಿತು ಎಂದು ತಿಳಿಸಿದ್ದಾರೆ.
ಇನ್ನೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ ಎಂದು ಹೇಳಿದ್ದಾರೆ.
