Featured

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆ್ಯಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿಯಿಂದ ಆಗಸ್ಟ್ 22ರಂದು ಉಡುಪಿಯಲ್ಲಿ ಸಭೆ ನಡೆಯಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮಿತಿಯ ಸ್ಥಾಪಕ, ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದರು.

ಕರಾವಳಿಯಿಂದ ಬೆಂಗಳೂರಿನ ಹೈಕೋರ್ಟ್‌ಗೆ ಪ್ರಕರಣಗಳ ವಿಚಾರಣೆಗೆ ತೆರಳಲು 900ರಿಂದ 1,000 ಕಿ.ಮೀ.ಗೂ ಅಧಿಕ ದೂರ ಪ್ರಯಾಣಿಸಬೇಕಾಗಿದ್ದು, ಮಳೆಗಾಲದಲ್ಲಿ ಸಾರ್ವಜನಿಕರು, ಮಹಿಳೆಯರು ಹಾಗೂ ಕಕ್ಷಿದಾರರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಕರಾವಳಿಯಲ್ಲಿ ಪೀಠ ಸ್ಥಾಪನೆಯಾದರೆ ಕಡಿಮೆ ವೆಚ್ಚದಲ್ಲಿ ತ್ವರಿತ ನ್ಯಾಯ ದೊರೆಯಲಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ವಕೀಲರು, ಪತ್ರಕರ್ತರು, ಸಾಮಾಜಿಕ ಹಾಗೂ ಉದ್ಯಮ ಸಂಘಟನೆಗಳು, ವಿದ್ಯಾರ್ಥಿ ಮತ್ತು ಕಾರ್ಮಿಕ ಸಂಘಟನೆಗಳು, ಮಾಜಿ ಸೈನಿಕರು, ಆಟೋ ಚಾಲಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಹೋರಾಟವನ್ನು ವಕೀಲರಿಗೆ ಸೀಮಿತಗೊಳಿಸದೆ ಇಡೀ ಕರಾವಳಿ ಜನತೆಯ ಧ್ವನಿಯಾಗಿಸುವ ಉದ್ದೇಶವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪೌರ್ಣಾಮಿ ಪ್ರೇಮ್, ವಿಜಯ್ ಡಿಸೋಜಾ, ಮಾಧವ ಕಾಮತ್, ಸರಿತಾ ಹಾಗೂ ಸುರೇಶ್ ಕಾಮತ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

48 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 hour ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

1 hour ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago