ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಸಮಿತಿ ರಚಿಸಿ, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮಾನ್ಯ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು ಬಕ್ರು ಅವರು ಭರವಸೆ ನೀಡಿದ್ದಾರೆ ಎಂದು ಹೈಕೋರ್ಟ್ ಕರಾವಳಿ ಸಂಚಾರಿ ಪೀಠ ಸ್ಥಾಪನೆ ಹೋರಾಟ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕರ್ನಾಟಕ ಸರ್ಕಾರ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ. ಈ ಹಿನ್ನೆಲೆಯಲ್ಲಿ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ವಿವಿಧ ಕಡೆಗಳಲ್ಲಿ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು, ಜಿಲ್ಲೆಗಳ ನಡುವಿನ ಚರ್ಚೆಗಳು ಹಾಗೂ ಎದುರಾಗಿರುವ ಅಡೆತಡೆಗಳ ಕುರಿತು ಇಂದು ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ವಿಚಾರ ವಿನಿಮಯ ನಡೆಸಿತು.ನಿಯೋಗದಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ಜಗದೀಶ್ ಶೇಣವ, ಉಡುಪಿ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ, ರೋನಾಲ್ಡ್ ಪ್ರವೀಣ್, ಮಾಜಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ರಾಘವೇಂದ್ರ ರಾವ್, ಪ್ರಧಾನ ಜಿಲ್ಲಾ ಸರ್ಕಾರಿ ವಕೀಲರು ಹಾಗೂ ಕರಾವಳಿ ಹೈಕೋರ್ಟ್ ಪೀಠ ಸಮಿತಿಯ ಪಿಆರ್‌ಒ ಎಂ. ಪಿ. ನೊರೋನ್ಹಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠದ ಅಗತ್ಯತೆಯ ಬಗ್ಗೆ ತಮಗೆ ಅರಿವಿದ್ದು, ಈ ಕುರಿತು ನಿಯೋಗದೊಂದಿಗೆ ವಿವರವಾಗಿ ವಿಚಾರ ವಿನಿಮಯ ನಡೆಸಿದರು. ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದ ವಾಸ್ತವಾಂಶಗಳು ಹಾಗೂ ವಿವಿಧ ವಿಚಾರಗಳನ್ನು ಪರಿಶೀಲಿಸಲು ಕೂಡಲೇ ಒಂದು ಸಮಿತಿಯನ್ನು ರಚಿಸುವಂತೆ ನಿಯೋಗ ಮಾಡಿದ ಮನವಿಯನ್ನು ಅವರು ಪರಿಗಣಿಸುವುದಾಗಿ ತಿಳಿಸಿದರು. ಸಮಿತಿಯ ಮೂಲಕ ವಾಸ್ತವಾಂಶಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆಗೆ ಕರಾವಳಿ ಭಾಗದ ಬಾರ್ ಅಸೋಸಿಯೇಷನ್‌ಗಳ ಸದಸ್ಯರು, ಸಾರ್ವಜನಿಕರು, ಜನಸಾಮಾನ್ಯರು, ಸಂಘ-ಸಂಸ್ಥೆಗಳು, ವಿವಿಧ ಕಾರ್ಯಕರ್ತರು ಹಾಗೂ ಇತರ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರಿಂದಲೂ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಕರ್ನಾಟಕ ಸರ್ಕಾರವೂ ಮಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಸಂದರ್ಭದಲ್ಲಿ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಯೊಂದಿಗೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯ ವಿಚಾರವೂ ಪ್ರಮುಖವಾಗಿರಲಿದೆ. ಸಂಚಾರಿ ಪೀಠ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಶ್ರೀ ಐವನ್ ಡಿ’ಸೋಜಾ ತಿಳಿಸಿದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೆಪ್ಟೆಂಬರ್ ತಿಂಗಳಲ್ಲಿ ಈ ಕುರಿತು ಮತ್ತೊಮ್ಮೆ ಭೇಟಿ ನೀಡಿ ವಿಚಾರ ವಿನಿಮಯ ನಡೆಸುವುದಾಗಿ ತಿಳಿಸಿರುವುದು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಐವನ್ ಡಿ’ಸೋಜಾ ಹೇಳಿದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…
ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನವನ್ನು ಸರ್ಕಾರಿ ರಜಾದಿನವಾಗಿ ಘೋಷಿಸುವಂತೆ…