ಮಂಗಳೂರು/ಉಡುಪಿ: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟರೀ ಕೃತ ದೋಣಿ ಹಾಗೂ ಸಾಂಪ್ರ ದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ಎಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.
ಮೀನುಗಾರಿಕೆ ನಿಷೇಧದ ಸರಕಾರದ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನು ಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.
ಕರಾವಳಿಯ ಎಲ್ಲ ಮೀನುಗಾರರ ಹಿತದೃಷ್ಟಿ ಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲ ಮೀನು ಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…