ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದಾರೆ.
ಸುಮಾರು 10 ದಿನಗಳ ಹಿಂದೆ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡೀಲ್ ಪ್ರದೇಶದ ಹಲವಾರು ಮನೆಗಳ ಸದಸ್ಯರು ಈ ಕಾಯಿಲೆಗೆ ತುತ್ತಾಗಿದ್ದರು.
ಪ್ರಸ್ತುತ ಸಮೀಪದ ಪೆರ್ಮುದೆ, ಎಕ್ಕಾರು ಗ್ರಾಮ ಪಂಚಾಯತ್, ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಗೂ ಹರಡಿದ್ದು, ಪರಿಸರದಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡುವವರ ಸಂಖ್ಯೆ ಹೆಚ್ಚುತ್ತಿದೆ. ಬಾಧಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳೂ ಇದ್ದು, ಅವರ ಮೂಲಕ ವೇಗವಾಗಿ ಇತರರಿಗೆ ಹರಡುವ ಸಾಧ್ಯತೆ ಇದೆ.
ಲಾಲಾಜಿಗೆ ಊರಿನ ಅಭಿವೃದ್ಧಿಯ ಕಾಳಜಿಗಿಂತ ತನ್ನ ಬಂಡವಾಳ ಗಟ್ಟಿ ಮಾಡಿಕೊಳ್ಳುವುದೇ ಟೆಂಕ್ಷನ್..
ಮುನ್ನೆಚ್ಚರಿಕೆ ಅಗತ್ಯ
ಈ ಬಗ್ಗೆ ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಚಾರಿಸಿದಾಗ ಕೆಂಗಣ್ಣು ಸಮಸ್ಯೆ ಬಾಧಿಸಿರುವ ಬಗ್ಗೆ ಯಾವುದೇ ಮಾಹಿತಿಗಳು ಈ ತನಕ ಬಂದಿಲ್ಲ ಎಂದು ಹೇಳಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸುವುದರಿಂದ ಈ ಕಾಯಿಲೆಯಿಂದ ದೂರ ಇರಬಹುದು ಎಂದು ಅವರು ತಿಳಿಸಿದ್ದಾರೆ.
ಏನಿದು ಕಾಯಿಲೆ?
“ಮದ್ರಾಸ್ ಐ’ ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ ಸೋಂಕು. ಕಣ್ಣಿನ ಬಿಳಿಭಾಗದ ಮೇಲ್ಮೆ ಮತ್ತು ಕಣೆÅಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣ. ಇದು ಸುಲಭವಾಗಿ ಹರಡುವ ಸೋಂಕು ರೋಗ.
ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣಗಳನ್ನು ಕಡಿಮೆ ಮಾಡಲು ಐ ಡ್ರಾಪ್‌ನಂತಹ ಔಷಧಗಳನ್ನು ವೈದ್ಯರು ಸೂಚಿಸುತ್ತಾರೆ.
ಕೆಂಗಣ್ಣು ರೋಗ ಪ್ರದೇಶದಲ್ಲಿ ಇರುವಾಗ ಕಣ್ಣುಗಳನ್ನು ಮುಟ್ಟಿ ಕೊಳ್ಳದಿರುವುದು, ಆಗಾಗ ಕೈಗಳನ್ನು ಸ್ವತ್ಛಗೊಳಿಸಿಕೊಳ್ಳುವುದು, ರೋಗಪೀಡಿತರ ಸಂಪರ್ಕದಿಂದ ದೂರ ಇರುವ ಮೂಲಕ ಕೆಂಗಣ್ಣು ಸೋಂಕು ಪ್ರಸರಣ ತಪ್ಪಿಸಬಹುದು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…