Featured

ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣುಕಾಯಿಲೆ ಸಮಸ್ಯೆ  ; ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ – Vishwanews24

ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣುಕಾಯಿಲೆ ಸಮಸ್ಯೆ  ; ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ

ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದಾರೆ.

ಸುಮಾರು 10 ದಿನಗಳ ಹಿಂದೆ ಪಡುಪೆರಾರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಡೀಲ್‌ ಪ್ರದೇಶದ ಹಲವಾರು ಮನೆಗಳ ಸದಸ್ಯರು ಈ ಕಾಯಿಲೆಗೆ ತುತ್ತಾಗಿದ್ದರು.

ಪ್ರಸ್ತುತ ಸಮೀಪದ ಪೆರ್ಮುದೆ, ಎಕ್ಕಾರು ಗ್ರಾಮ ಪಂಚಾಯತ್‌, ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಗೂ ಹರಡಿದ್ದು, ಪರಿಸರದಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡುವವರ ಸಂಖ್ಯೆ ಹೆಚ್ಚುತ್ತಿದೆ. ಬಾಧಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳೂ ಇದ್ದು, ಅವರ ಮೂಲಕ ವೇಗವಾಗಿ ಇತರರಿಗೆ ಹರಡುವ ಸಾಧ್ಯತೆ ಇದೆ.

ಲಾಲಾಜಿಗೆ ಊರಿನ ಅಭಿವೃದ್ಧಿಯ ಕಾಳಜಿಗಿಂತ ತನ್ನ ಬಂಡವಾಳ ಗಟ್ಟಿ ಮಾಡಿಕೊಳ್ಳುವುದೇ ಟೆಂಕ್ಷನ್..

ಮುನ್ನೆಚ್ಚರಿಕೆ ಅಗತ್ಯ
ಈ ಬಗ್ಗೆ ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಚಾರಿಸಿದಾಗ ಕೆಂಗಣ್ಣು ಸಮಸ್ಯೆ ಬಾಧಿಸಿರುವ ಬಗ್ಗೆ ಯಾವುದೇ ಮಾಹಿತಿಗಳು ಈ ತನಕ ಬಂದಿಲ್ಲ ಎಂದು ಹೇಳಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸುವುದರಿಂದ ಈ ಕಾಯಿಲೆಯಿಂದ ದೂರ ಇರಬಹುದು ಎಂದು ಅವರು ತಿಳಿಸಿದ್ದಾರೆ.

ಏನಿದು ಕಾಯಿಲೆ?
“ಮದ್ರಾಸ್‌ ಐ’ ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ ಸೋಂಕು. ಕಣ್ಣಿನ ಬಿಳಿಭಾಗದ ಮೇಲ್ಮೆ ಮತ್ತು ಕಣೆÅಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣ. ಇದು ಸುಲಭವಾಗಿ ಹರಡುವ ಸೋಂಕು ರೋಗ.

ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣಗಳನ್ನು ಕಡಿಮೆ ಮಾಡಲು ಐ ಡ್ರಾಪ್‌ನಂತಹ ಔಷಧಗಳನ್ನು ವೈದ್ಯರು ಸೂಚಿಸುತ್ತಾರೆ.

ಕೆಂಗಣ್ಣು ರೋಗ ಪ್ರದೇಶದಲ್ಲಿ ಇರುವಾಗ ಕಣ್ಣುಗಳನ್ನು ಮುಟ್ಟಿ ಕೊಳ್ಳದಿರುವುದು, ಆಗಾಗ ಕೈಗಳನ್ನು ಸ್ವತ್ಛಗೊಳಿಸಿಕೊಳ್ಳುವುದು, ರೋಗಪೀಡಿತರ ಸಂಪರ್ಕದಿಂದ ದೂರ ಇರುವ ಮೂಲಕ ಕೆಂಗಣ್ಣು ಸೋಂಕು ಪ್ರಸರಣ ತಪ್ಪಿಸಬಹುದು.

ಮಂಗಳೂರು: ಲಾರಿ ಢಿಕ್ಕಿ ; ಪಾದಚಾರಿ ಸಾವು – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago