ಉಡುಪಿ : ಕರಾವಳಿ ಚಿಯರ್ ಬಾಯ್ ಒಬ್ಬರ ವಿಡಿಯೋ ಭಾರಿ ವೈರಲ್ ಆಗಿದ್ದು, ಕ್ರಿಕೆಟ್ ಮ್ಯಾಚ್ ಗಳಲ್ಲಿ ಕಾಣ ಸಿಗುವ ಚಿಯರ್ ಗರ್ಲ್ಸ್ ರೀತಿಯಾಗಿಯೇ ಇಲ್ಲೊಬ್ಬರು ಸ್ಥಳೀಯ ಕ್ರೀಡಾಕೂಟಗಳಲ್ಲಿ ಚಿಯರ್ ಬಾಯ್ ಆಗಿ ಮಿಂಚುತ್ತಿದ್ದು, ಕರಾವಳಿಯಲ್ಲಿ ಚಿಯರ್ ಬಾಯ್ ಆಗಿ ಭಾರೀ ಫೇಮಸ್ ಆಗಿದ್ದಾರೆ.
ವೃತ್ತಿಯಲ್ಲಿ ಪೇಂಟರ್ ಆಗಿರುವ ಚೇತನ್, ಹಿಂದಿನಿಂದಲೂ ತಮ್ಮ ಊರಿನ ಯಾವುದೇ ಕಾರ್ಯಕ್ರಮದಲ್ಲಿ ಎಲ್ಲರನ್ನು ನಗಿಸುವ ಪ್ರಯತ್ನ ಮಾಡುತಿದ್ದರು. ಕೆಸರು ಗದ್ದೆ ಕ್ರೀಡಾಕೂಟದಲ್ಲಿ ವಿಶೇಷ ನೃತ್ಯ, ಹುಲಿವೇಷ ಕುಣಿತ, ವಾಲಿಬಾಲ್ ಮ್ಯಾಚ್ ಸಂದರ್ಭ ಬೊಂಬೆ ಕುಣಿತ ಸೇರಿದಂತೆ ಹಲವು ಬಗೆಗಳಲ್ಲಿ ನೆರೆದವರನ್ನು ಮನರಂಜಿಸುತಿದ್ದಾರೆ.
ಇತ್ತೀಚೆಗೆ ನಡೆದ ಕ್ರೀಡಾಕೂಟದಲ್ಲಿ ಚೇತನ್ ಅವರು ತನ್ನದೇ ಆದ ಡೈಲಾಗ್, ನೃತ್ಯದ ಮೂಲಕ ಎಲ್ಲರನ್ನು ನಗೆಗಡಲಲ್ಲಿ ತೇಲಿಸಿದ್ದಾರೆ. ಚೇತನ್ ಹಾಡಿನ ತಾಳಕ್ಕೆ ತಕ್ಕಂತೆ ಚಂಡೆಯವರೂ ಬಾರಿಸಿದ ವಿಡಿಯೋ ಸಾಮಾಜಿಕ ತಾಣದಲ್ಲಿ ಶಹಬ್ಬಾಸ್ ಗಿರಿ ಪಡೆದುಕೊಂಡಿದೆ. ಕ್ರಿಯೇಟಿವಿಟಿ ಮೂಲಕ ಪ್ರಯೋಗಗಳನ್ನು ಮಾಡುತ್ತಿರುವುದರಿಂದ ಎಲ್ಲರ ಮೆಚ್ಚುಗೆಯನ್ನು ಚೇತನ್ ಪಡೆದಿದ್ದಾರೆ.
ವಿಶೇಷವಾಗಿ ಹಗ್ಗಜಗ್ಗಾಟ ಪಂದ್ಯಾಟದಲ್ಲಿ ಹೆಚ್ಚಾಗಿ ಆಟಗಾರರನ್ನು ಹುರಿದುಂಬಿಸುತ್ತಿದ್ದು. ಸಿನಿಮಾ ಡೈಲಾಗ್‌ಗಳನ್ನು ಹೇಳಿ ಎಲ್ಲರ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದೀಗ ಚೇತನ್ ಎಷ್ಟರ ಮಟ್ಟಿಗೆ ಪ್ರಸಿದ್ಧಿ ಪಡೆದಿದ್ದಾರೆ ಅಂದರೆ ಕ್ರೀಡಾಕೂಟಕ್ಕೆ ಚೇತನ್ ಬರುತ್ತಾರಾ ಎಂದು ವಿಚಾರಿಸಿ ಇವರ ಮನೋರಂಜನೆ ನೋಡುವುದಕ್ಕೆಂದೆ ಬರುವವರು ಹೆಚ್ಚಾಗಿದ್ದಾರೆ.
ಚೇತನ್ ಹಾಡಿನ ತಾಳಕ್ಕೆ ತಕ್ಕಂತೆ ಚಂಡೆಯವರೂ ಬಾರಿಸಿದ ವಿಡಿಯೋ ಸಾಮಾಜಿಕ ತಾಣದಲ್ಲಿ ಶಹಬ್ಬಾಸ್ ಗಿರಿ ಪಡೆದುಕೊಂಡಿದೆ. ಕ್ರಿಯೇಟಿವಿಟಿ ಮೂಲಕ ಪ್ರಯೋಗಗಳನ್ನು ಮಾಡುತ್ತಿರುವುದರಿಂದ ಎಲ್ಲರ ಮೆಚ್ಚುಗೆಯನ್ನು ಚೇತನ್ ಪಡೆದಿದ್ದಾರೆ..
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…