Featured

ಕರಾವಳಿಯ ಟೆಂಪಲ್ ಟೂರಿಸಂಗೆ ವಿಶೇಷ ಆದ್ಯತೆ ನೀಡಿ:- ಶಾಸಕ ಕಾಮತ್ ಮನವಿ – vishwanews24

ಕರಾವಳಿಯ ಟೆಂಪಲ್ ಟೂರಿಸಂಗೆ ವಿಶೇಷ ಆದ್ಯತೆ ನೀಡಿ:-ಸರ್ಕಾರದ ಗಮನ ಸೆಳೆದ ಶಾಸಕ ಕಾಮತ್

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಟೆಂಪಲ್ ಟೂರಿಸಂ ಬಗ್ಗೆಯೂ ವಿಶೇಷ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದ ವೇಳೆ ಸರ್ಕಾರದ ಗಮನ ಸೆಳೆದರು.

ದೇಶದ ಪ್ರಸಿದ್ಧ ತೀರ್ಥಕ್ಷೇತ್ರಗಳಂತೆ ಕರಾವಳಿಯಲ್ಲೂ ಸುಪ್ರಸಿದ್ಧ ತೀರ್ಥಕ್ಷೇತ್ರಗಳಿವೆ. ಇಲ್ಲಿನ ದೈವ-ದೇವರುಗಳಿಗೆ ದೇಶ, ವಿದೇಶಗಳಲ್ಲೂ ಭಕ್ತರಿದ್ದಾರೆ. ಹೀಗಾಗಿ ಪ್ರತಿವರ್ಷ ಸಾವಿರಾರು ಭಕ್ತರು ರಸ್ತೆ, ಜಲ, ವಾಯು ಸಾರಿಗೆಗಳನ್ನು ಬಳಸಿಕೊಂಡು ಇಲ್ಲಿನ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇಲ್ಲಿಗೆ ಭೇಟಿ ನೀಡುವವರಿಗೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಟ್ಟರೆ ಕರಾವಳಿ ಧಾರ್ಮಿಕ ಟೂರಿಸಂಗೆ ಹೇರಳ ಅವಕಾಶವಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ರವರು ಟೆಂಪಲ್ ಟೂರಿಸಮ್ ಗೆ ಇಡೀ ರಾಜ್ಯದಲ್ಲಿ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಈ ಮೂರೂ ಜಿಲ್ಲೆಗಳು ನೀಡಿರುವ ಕೊಡುಗೆ ಬಹಳಷ್ಟಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕೆಲವೇ ತಿಂಗಳಲ್ಲಿ ಬರಲಿರುವ ನೂತನ ಪ್ರವಾಸೋದ್ಯಮ ನೀತಿಯಲ್ಲಿ ಶಾಸಕ ಕಾಮತ್ ಅವರು ಉಲ್ಲೇಖಿಸಿದ ಕರಾವಳಿಯ ಟೆಂಪಲ್ ಟೂರಿಸಂಗೂ ವಿಶೇಷ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago