ಉಡುಪಿ: ಕರಾವಳಿಯ ಪ್ರಸಿದ್ಧ ದೇವಿಯ ದೇಗುಲ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಉಡುಪಿಯಲ್ಲಿ ಚಿನ್ನದ ಪಲ್ಲಕ್ಕಿ ಸಿದ್ಧಗೊಂಡಿದೆ.
ಈ ಪಲ್ಲಕ್ಕಿ ತಯಾರಿಗೆ 12 ಕಿಲೋ ತೂಕದ ಚಿನ್ನ ಬಳಸಲಾಗಿದೆ. ಸುಮಾರು ಐದು ಕೋಟಿ ರೂ. ವೆಚ್ಚದಲ್ಲಿ ಈ ಕಲಾತ್ಮಕ ಪಲ್ಲಕಿ ಸಿದ್ಧಗೊಳಿಸಲಾಗಿದೆ. ದೇವಾಲಯಗಳ ಆಭರಣ, ರಥ ಹಾಗೂ ಪಲ್ಲಕಿ ನಿರ್ಮಾಣಕ್ಕೆ ಹೆಸರುವಾಸಿಯಾದ ಉಡುಪಿಯ ಸ್ವರ್ಣ ಜುವೆಲ್ಲರ್ಸ್ ಒಂದು ತಿಂಗಳ ಕಾಲಾವಧಿಯಲ್ಲಿ ಪಲ್ಲಕ್ಕಿಯನ್ನು ನಿರ್ಮಾಣ ಮಾಡಿದೆ.
ಉಡುಪಿಯಲ್ಲಿ ಸಿದ್ಧಗೊಂಡ ಸ್ವರ್ಣ ಪಲ್ಲಕ್ಕಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗಿದೆ. ಸುಮಾರು 5 ಕೋಟಿ ರೂ. ವೆಚ್ಚದ ಈ ಸ್ವರ್ಣ ಪಲ್ಲಕ್ಕಿಯ ಗುಣಮಟ್ಟ, ಚಿನ್ನದ ಪರಿಶುದ್ಧತೆ, ತೂಕ ಸಹಿತ ವಿವಿಧೆಡೆ ಕೆಲಸ ಕಾರ್ಯಗಳನ್ನು ಚಿತ್ರೀಕರಣ ಮಾಡಲಾಗಿತ್ತು. ಬಪ್ಪನಾಡಿನ ಭಕ್ತರ ಸಹಕಾರದೊಂದಿಗೆ ರೂಪಿತವಾಗಿರುವ ಈ ಸ್ವರ್ಣ ಪಲ್ಲಕ್ಕಿಯನ್ನು ಕಳೆದ 2 ತಿಂಗಳೊಳಗೆ ಪೂರ್ಣಗೊಳಿಸಲಾಗಿದೆ ಎಂದು ಸ್ವರ್ಣ ಸಂಸ್ಥೆಯ ನಿರ್ದೇಶಕ ಗುಜ್ಜಾಡಿ ರಾಮದಾಸ್ ನಾಯಕ್ ತಿಳಿಸಿದ್ದಾರೆ.
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…