ಉಡುಪಿ

ಕರಾವಳಿಯ ಸಹಕಾರಿ ಕ್ಷೇತ್ರದ ಸಾಧನೆ ಮತ್ತು ಯಶಸ್ಸು ರಾಷ್ಟ್ರಕ್ಕೆ ಮಾದರಿಯಾಗಿದೆ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್- vishwanews24

ಕಾಪು: ಮೂಳೂರಿನಲ್ಲಿ ನಬಾರ್ಡ್ ನಿಯೋಜಿತ ಅಧ್ಯಯನ ತಂಡದಿಂದ ನವೋದಯ ಸದಸ್ಯರೊಂದಿಗೆ ಸಂವಾದ
ಕಾಪು, ಮಾ. ೨೧ : ಸಹಕಾರಿ ಕ್ಷೇತ್ರದ ಬೆಳವಣಿಗೆ ಮತ್ತು ಪ್ರಗತಿಯಲ್ಲಿ ಕರಾವಳಿಯ ಸಹಕಾರಿಗಳ ಸೇವೆ ಸ್ಮರಣೀಯವಾಗಿದೆ. ಸಹಕಾರಿಗಳು ಆರ್ಥಿಕ ರಂಗದಲ್ಲಿ ಸ್ವತಂತ್ರವಾಗಿ ವ್ಯವಹರಿಸುವ ಶಕ್ತಿಯನ್ನು ಮೈಗೂಡಿಸಿಕೊಂಡಿದ್ದು, ಸಹಕಾರಿ ಸಂಸ್ಥೆಗಳ ಮೂಲಕವಾಗಿ ಜನರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಇಲ್ಲಿ ಪುರುಷರ ಜೊತೆಗೆ ಮಹಿಳೆಯರೂ ಕೂಡಾ ಸಾಕಷ್ಟು ಮುಂದುವರಿದಿದ್ದು, ಕರಾವಳಿಯ ಸಹಕಾರಿ ರಂಗದ ಅಭಿವೃದ್ಧಿಯನ್ನು ಇಡೀ ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಅನುಸರಿಸಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಹೇಳಿದರು.
ಕಾಪು ಸಮೀಪದ ಮೂಳೂರಿನ ಸಾಯಿರಾಧಾ ಹೆರಿಟೇಜ್‌ನಲ್ಲಿ ಶನಿವಾರ ಅವಿಭಜಿತ ಜಿಲ್ಲೆಯ ಸಹಕಾರ ಕ್ಷೇತ್ರ ಸಮಗ್ರ ಅಧ್ಯಯನಕ್ಕೆ ಆಗಮಿಸಿದ ನಬಾರ್ಡ್ ನಿಯೋಜಿತ ಅಧ್ಯಯನ ತಂಡದ ಸದಸ್ಯರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರೊಂದಿಗೆ ಹಮ್ಮಿಕೊಂಡ ಸಂವಾದ ಕಾರ್ಯಕ್ರಮ, ನವೋದಯ ಸ್ವಸಹಾಯ ಗುಂಪುಗಳ ಸದಸ್ಯರ ಆಹಾರ ಮಳಿಗೆ, ಗೃಹೋಪಯೋಗಿ ವಸ್ತು ಪ್ರದರ್ಶನ, ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕವಾಗಿ ಸದೃಢಗೊಳ್ಳದಿದ್ದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸತ್ತಾರೆ. ಸ್ವಸಹಾಯ ಸಂಘಗಳು ರಚನೆಯಾದ ಬಳಿಕ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ. ಸ್ವಸಹಾಯ ಸಂಘಗಳ ರಚನೆಯ ಮೂಲಕ ಮಹಿಳೆಯರು ಆರ್ಥಿಕ ರಂಗದಲ್ಲಿ ಸ್ವತಂತ್ರರಾಗಿ ವ್ಯವಹರಿಸುವ ಶಕ್ತಿಯನ್ನು ಮೈಗೂಡಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ ಶ್ರಮ ಶ್ಲಾಘನೀಯವಾಗಿದ್ದು, ಸಹಕಾರಿ ರಂಗದಲ್ಲಿ ಅವರು ಹೊಸ ಕ್ರಾಂತಿಯನ್ನುಂಟು ಮಾಡಿದ್ದಾರೆ ಎಂದರು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಮಾತನಾಡಿ, ೧೯೯೪ರಲ್ಲಿ ಸಹಕಾರಿ ಸಂಸ್ಥೆಗಳು ನಷ್ಟದಲ್ಲಿದ್ದವು. ಸಹಕಾರಿ ಸಂಸ್ಥೆಗಳು ಲಾಭದಲ್ಲಿ ಇರಬೇಕು ಎನ್ನುವ ನಿಟ್ಟಿನಲ್ಲಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ಹೊಸ ಪ್ರಯತ್ನಗಳೊಂದಿಗೆ ಸಹಕಾರಿ ಕ್ರಾಂತಿಯನ್ನು ಉಂಟು ಮಾಡಿದ್ದು, ಸಹಕಾರಿ ಕ್ಷೇತ್ರದಲ್ಲಿ ಪೈಪೋಟಿ ಇದ್ದಾಗ ಮಾತ್ರ ಬೆಳೆಯಲು ಸಾಧ್ಯವಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರಿ ಸಂಸ್ಥೆಯಲ್ಲಿ ಗ್ರಾಹಕರಿಗೆ ಹೆಚ್ಚು ಹೆಚ್ಚು ಡಿವಿಡೆಂಡ್ ನೀಡುತ್ತಾ ಬಂದ ಕಾರಣ ಇಂದು ಎಲ್ಲಾ ಸಹಕಾರಿ ಸಂಸ್ಥೆಗಳು ಪ್ರಗತಿಯನ್ನು ಸಾಽಸುವಂತಾಗಿದೆ ಎಂದರು.
ನಿಯೋಗದಲ್ಲಿ ಜೊತೆಗಿದ್ದವರು : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ನೇತೃತ್ವದಲ್ಲಿ ಕರಾವಳಿಗೆ ಆಗಮಿಸಿದ ನಬಾರ್ಡ್ ನಿಯೋಜಿತ ಅಧ್ಯಯನ ತಂಡದಲ್ಲಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ. ಡಿ. ಹರೀಶ್, ಬಾಗಲಕೋಟೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯ ಕುಮಾರ್ ಸರನಾಯಕ್, ಕಲಬುರಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜ್‌ಕುಮಾರ್ ಪಾಟೀಲ್, ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ. ಅಶ್ವಥ್, ಬೆಂಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ. ಹನುಮಂತಯ್ಯ, ದಾವಣಗೆರೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಗದೀಶಪ್ಪ ಬಣಕಾರ್, ಧಾರವಾಡ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಲಿಂಗರಾಜು ಎಸ್. ಚಪ್ಪರದಳ್ಳಿ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚೆನ್ನವೀರಪ್ಪ, ಅಪೆಕ್ಸ್ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಽಕಾರಿ ಸಿ. ಎನ್. ದೇವರಾಜ್ ಮೊದಲಾದವರು ಜೊತೆಗಿದ್ದರು.
ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ, ರಾಜು ಪೂಜಾರಿ, ರಾಜೇಶ್ ರಾವ್ ಪಾಂಗಾಳ, ಮಹೇಶ್ ಹೆಗಡೆ, ಅಶೋಕ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಽಕಾರಿ ರವೀಂದ್ರ ಬಿ., ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ವಿವಿಧ ಸಹಕಾರ ಸಂಘಗಳ ಅಧ್ಯಕ್ಷರುಗಳು ಮತ್ತು ನಿರ್ದೇಶಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕ / ಬೆಳಪು ಸಿ.ಎ. ಬ್ಯಾಂಕ್ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿ, ವಂದಿಸಿದರು. ವಾಲ್ಸ ನ್ ಡೇಸಾ ಕಾರ್ಯಕ್ರಮ ನಿರೂಪಿಸಿದರು.

ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago