Featured

ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ :ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ  – Vishwanews24

ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ : ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ

ಮಂಗಳೂರು: ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಪ್ರಧಾನಮಂತ್ರಿಗಳು ಬಹಳ ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಬರುವಾಗ ಹಲವಾರು ಯೋಜನೆಗಳಿಗೆ ಮಂಜೂರಾತಿ ನೀಡಿದ್ದಾರೆ. 3800 ಕೋಟಿ ರೂ.ಗಳ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿರುವ ಯೋಜನೆಗಳಾಗಿದ್ದು, ಆರ್ಥಿಕ ಚಟುವಟಿಕೆ ಮತ್ತು ಬಂದರುಗಳ ಸಾಮರ್ಥ್ಯ ಹಾಗೂ ವ್ಯವಹಾರಗಳನ್ನು ಹೆಚ್ಚಿಸುವ ಹಾಗೂ ಉದ್ಯೋಗವನ್ನು ವೃದ್ಧಿಸುವ ಯೋಜನೆಗಳಾಗಿವೆ. ಕರ್ನಾಟಕಕ್ಕೆ 100 ಆಳ ಸಮುದ್ರ ಮೀನುಗಾರಿಕೆ ದೋಣಿಗಳನ್ನು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಂಜೂರು ಮಾಡಿದ್ದಾರೆ. ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿಸ್ತರಣೆ ಮಾಡಿದ್ದಾರೆ. ರಾಜ್ಯ ಸರ್ಕಾರವೂ ಹಲವಾರು ಯೋಜನೆಗಳನ್ನು ಈ ಭಾಗಕ್ಕೆ ಜಾರಿ ಮಾಡಿದ್ದು ಈ ಎಲ್ಲಾ ಯೋಜನೆಗಳಿಗೆ ಇಂದು ಚಾಲನೆ ದೊರೆಯಲಿದೆ ಎಂದರು.

ಬಂಟ್ವಾಳ: ಹೆಜ್ಜೇನು ದಾಳಿಗೆ 12 ವರ್ಷದ ಬಾಲಕ ಬಲಿ

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

20 hours ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

20 hours ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

21 hours ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

21 hours ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

22 hours ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

23 hours ago