ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯ ಕ್ಕೆ ನೀಡಿ : ಹಬೀಬ್ ಅಲಿ – vishwanews24
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯ ಕ್ಕೆ ನೀಡಿ : ಹಬೀಬ್ ಅಲಿ
ಕರಾವಳಿ ಭಾಗ ದ ಉದ್ದಗಲಕ್ಕೂ ಮುಸ್ಲಿಂ ಸಮುದಾಯದ ಜನಸಂಖ್ಯೆಯು ವ್ಯಾಪಕವಾಗಿದೆ. ಅದಲ್ಲದೆ ಹಲವಾರು ವರ್ಷಗಳಿಂದ ಮುಸ್ಲಿಂ ಸಮಾಜವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಕೊಂಡು ಬಂದಿದೆ.
ಉಡುಪಿ ಜಿಲ್ಲೆಯಲ್ಲಿ ಇಷ್ಟರವರೆಗೆ ಮುಸ್ಲಿಂ ಸಮುದಾಯಕ್ಕೆ ಯಾವುದೇ ಅವಕಾಶ ಸಿಗಲಿಲ್ಲ. ಆದ್ದರಿಂದ ಈ ಬಾರಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯದ ಮುಖಂಡರಿಗೆ ನೀಡಬೇಕೆಂದು ಕೆಪಿಸಿಸಿ ಸಂಯೋಜಕರು ಹಬೀಬ್ ಅಲಿ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಆಗ್ರಹಿಸಿದ್ದಾರೆ.
