ಕರಾವಳಿ ಎನ್ನ ಹೃದಯ ಅದನ್ನು ಬಿಟ್ಟು ಬೇರೆ ಅಭಿವೃದ್ಧಿ ಮಾಡಲು ಸಾಧ್ಯವೇ :ಕೇಂದ್ರ ಸಚಿವ ವಿ ಸೋಮಣ್ಣ
ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮತ್ಸ್ಯಗಂಧ ರೈಲು ನಿಲುಗಡೆಗೆ 8 ದಿನದಲ್ಲಿ ಕೆಲಸ ಶುರು
ಕಾಪು ಶಾಸಕರು ಗುರ್ಮೆ ಸುರೇಶ್ ಶೆಟ್ಟಿ, ಮನವಿಗೆ ಸ್ಪಂದಿಸಿದ ಸಚಿವ ಸೋಮಣ್ಣ
ಉಡುಪಿ ಜಿಲ್ಲೆ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಬಿದ್ರಿ ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಕುರ್ಲಾ(ಬಾಂಬೆ) ಮತ್ಸಗಂಧ ರೈಲ್ವೆ ನಿಲುಗಡೆಗೆ ಅವಕಾಶವಿಲ್ಲದೆ ಇದ್ದು ಸಾರ್ವಜನಿಕರು ಸಂಕಷ್ಟಕ್ಕೆ ಈಡಾಗಿರುತ್ತಾರೆ.
ಪಡುಬಿದ್ರೆ ಗ್ರಾಮವು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಹೆಜಮಾಡಿ, ಎರ್ಮಾಳು, ತೆಂಕ, ಬೆಳಪು, ಶಿರ್ವ, ಮುದರಂಗಡಿ ಹಾಗೂ ಕಾರ್ಕಳದ ಕಡೆಯಿಂದ ನೂರಾರು ಜನರು ಬಾಂಬೆಯಿಂದ ಪ್ರಯಾಣಿಸುವರಿಗೆ ಪಡುಬಿದ್ರೆ ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮತ್ತ್ವಗಂಧ ರೈಲ್ವೆ ನಿಲುಗಡೆ ಇಲ್ಲದೆ ಇರುವುದರಿಂದ ದೂರದ ಮುಲ್ಕಿ ಹಾಗೂ ಉಡುಪಿ ಇಂದ್ರಾಳಿಯಲ್ಲಿ ಸಾರ್ವಜನಿಕರು ಇಳಿದು ತಮ್ಮ ಸ್ವಂತ ಊರಿಗೆ ತೆರಳಲು ಸಂಕಷ್ಟಪಡುತ್ತಿದ್ದಾರೆ. ಆದ್ದರಿಂದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಬಿದ್ರೆ ಪಣೆಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಲ್ಲಿ ಸೂಕ್ತ ಕ್ರಮ ಕೈ ಕೈಗೊಳ್ಳುವಂತೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ರಾಜ್ಯ ರೈಲ್ವೆ ಸಚಿವ ಬಿ ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಮನವಿಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಕರಾವಳಿ ಭಾಗ ನಮಗೆ ಹೃದಯ ಇದ್ದಂತೆ ಅದನ್ನು ಬಿಟ್ಟು ಬೇರೆ ಅಭಿವೃದ್ಧಿ ಮಾಡಲು ಸಾಧ್ಯವಿದೆಯೇ ಎಂಟು ದಿನದ ಅವಕಾಶ ಕೊಡಿ ಶಾಸಕರು ನೀಡಿರುವ ಮನವಿಗೆ ಸೂಕ್ತವಾಗಿ ಸ್ಪಂದಿಸಿ ಸರ್ವೇ ಕಾರ್ಯ ಆರಂಭ ಮಾಡಿ ಕೂಡಲೇ ಇದಕ್ಕೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆಯ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿಆರ್ ಮೆಂಡನ್ ಕ್ಷೇತ್ರ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗೀತಾಂಜಲಿ ಎಂ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…