ಉಡುಪಿ

ಕರಾವಳಿ ಕರ್ನಾಟಕ ಬಿಜೆಪಿಯ ಭದ್ರಕೋಟೆ ಎಂಬುದನ್ನು ಜನತೆ ಮತ್ತೂಮ್ಮೆ ಸಾಬೀತು ಮಾಡಲಿದ್ದಾರೆ : ಯಶ್‌ಪಾಲ್‌ ಸುವರ್ಣ – Vishwanews24

ಕರಾವಳಿ ಕರ್ನಾಟಕ ಬಿಜೆಪಿಯ ಭದ್ರಕೋಟೆ ಎಂಬುದನ್ನು ಜನತೆ ಮತ್ತೂಮ್ಮೆ ಸಾಬೀತು ಮಾಡಲಿದ್ದಾರೆ : ಯಶ್‌ಪಾಲ್‌ ಸುವರ್ಣ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 10 ವರ್ಷಗಳ ಅಭಿವೃದ್ಧಿ ಕಾರ್ಯಗಳೇ ಕೋಟ ಶ್ರೀನಿವಾಸ ಪೂಜಾರಿ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್‌ ಚೌಟ, ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ, ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಕರ್ನಾಟಕ ಬಿಜೆಪಿಯ ಭದ್ರಕೋಟೆ ಎಂಬುದನ್ನು ಜನತೆ ಮತ್ತೂಮ್ಮೆ ಸಾಬೀತು ಮಾಡಲಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ಉಡುಪಿ ಜಿಲ್ಲಾ ಯುವಮೋರ್ಚಾ ಆಯೋಜಿಸಿದ್ದ ಯುವ ಭಾರತ ಸಮಾ ವೇಶದಲ್ಲಿ ಅವರು ಮಾತನಾಡಿದರು.

ಮೋದಿ 2014ರಿಂದ ದೇಶದ ಸಾರಥ್ಯ ವಹಿಸಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ.ಸಹಕಾರ ಕ್ಷೇತ್ರದ ಬಲವರ್ಧನೆಗೆ ಪ್ರತ್ಯೇಕ ಸಚಿವಾಲಯ, ಮೀನುಗಾರಿಕೆ ಅಭಿವೃದ್ಧಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ನೂತನ ಸಚಿವಾಲಯ ಸ್ಥಾಪಿಸಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 26 ಸಾವಿರ ಕೋಟಿ ರೂ. ಅನು ದಾನ ಒದಗಿಸಿ ಮೀನುಗಾರಿಕೆ ಚಟು ವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡಿದ್ದಾರೆ ಎಂದರು.
ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ದು, ಆಯುಷ್ಮಾನ್‌ ಭಾರತ್‌, ಜನೌಷಧ ಕೇಂದ್ರ, ಕಿಸಾನ್‌ ಸಮ್ಮಾನ್‌ ಯೋಜನೆ, ಸ್ವ ಉದ್ಯೋಗಕ್ಕಾಗಿ ವಿಶ್ವಕರ್ಮ ಯೋಜನೆ, ಮುದ್ರಾ ಯೋಜನೆ, ಮೇಕ್‌ ಇನ್‌ ಇಂಡಿಯಾ, ಡಿಜಿಟಲ್‌ ಇಂಡಿಯಾ, ಮುಂತಾದ ಹಲವು ಯೋಜನೆಗಳ ಅನುಷ್ಠಾನದ ಮೂಲಕ ಮೋದಿ ಸರಕಾರ ದೇಶದ ಜನತೆಯ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ತಿಳಿಸಿದರು.

ಈ ಬಾರಿ ಪಕ್ಷ ಸರಳ ಸಜ್ಜನ ವ್ಯಕ್ತಿತ್ವದ ಕೋಟ ಶ್ರೀನಿವಾಸ ಪೂಜಾರಿ, ನಿವೃತ್ತ ಯೋಧ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ, ಅನುಭವಿ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಂತಹ ಸಮರ್ಥ ಅಭ್ಯರ್ಥಿಗಳನ್ನು ನೀಡಿದ್ದು, ಕಾರ್ಯಕರ್ತರು ಮತ್ತೂಮ್ಮೆ ಮೋದಿಯವರನ್ನು ಪ್ರಧಾನಿಯನ್ನಾ ಗಿಸುವ ಪಣತೊಟ್ಟಿದ್ದಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್‌ ಕುಮಾರ್‌ ಕುಂದಾಪುರ, ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮುಖಂಡರಾದ ಅರುಣ್‌ ಕುಮಾರ್‌ಪುತ್ತಿಲ, ಶಾಸಕರಾದ ಸುನಿಲ್‌ ಕುಮಾರ್‌, ಸುರೇಶ್‌ ಶೆಟ್ಟಿ ಗುರ್ಮೆ, ಕಿರಣ್‌ ಕೊಡ್ಗಿ, ಹರೀಶ್‌ ಪೂಂಜಾ ಹಾಗೂ ಪಕ್ಷದ ಮುಖಂಡರಾದ ಪ್ರಮೋದ್‌ ಮಧ್ವರಾಜ್‌, ಕೆ. ರಘುಪತಿ ಭಟ್‌, ಉದಯ ಕುಮಾರ್‌ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷರಾದ ಪೃಥ್ವಿರಾಜ್‌ ಶೆಟ್ಟಿ ಬಿಲ್ಲಾಡಿ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago