ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 10 ವರ್ಷಗಳ ಅಭಿವೃದ್ಧಿ ಕಾರ್ಯಗಳೇ ಕೋಟ ಶ್ರೀನಿವಾಸ ಪೂಜಾರಿ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ, ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ, ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಕರ್ನಾಟಕ ಬಿಜೆಪಿಯ ಭದ್ರಕೋಟೆ ಎಂಬುದನ್ನು ಜನತೆ ಮತ್ತೂಮ್ಮೆ ಸಾಬೀತು ಮಾಡಲಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಉಡುಪಿ ಜಿಲ್ಲಾ ಯುವಮೋರ್ಚಾ ಆಯೋಜಿಸಿದ್ದ ಯುವ ಭಾರತ ಸಮಾ ವೇಶದಲ್ಲಿ ಅವರು ಮಾತನಾಡಿದರು.
ಮೋದಿ 2014ರಿಂದ ದೇಶದ ಸಾರಥ್ಯ ವಹಿಸಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ.ಸಹಕಾರ ಕ್ಷೇತ್ರದ ಬಲವರ್ಧನೆಗೆ ಪ್ರತ್ಯೇಕ ಸಚಿವಾಲಯ, ಮೀನುಗಾರಿಕೆ ಅಭಿವೃದ್ಧಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ನೂತನ ಸಚಿವಾಲಯ ಸ್ಥಾಪಿಸಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 26 ಸಾವಿರ ಕೋಟಿ ರೂ. ಅನು ದಾನ ಒದಗಿಸಿ ಮೀನುಗಾರಿಕೆ ಚಟು ವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡಿದ್ದಾರೆ ಎಂದರು.
ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು, ಆಯುಷ್ಮಾನ್ ಭಾರತ್, ಜನೌಷಧ ಕೇಂದ್ರ, ಕಿಸಾನ್ ಸಮ್ಮಾನ್ ಯೋಜನೆ, ಸ್ವ ಉದ್ಯೋಗಕ್ಕಾಗಿ ವಿಶ್ವಕರ್ಮ ಯೋಜನೆ, ಮುದ್ರಾ ಯೋಜನೆ, ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಮುಂತಾದ ಹಲವು ಯೋಜನೆಗಳ ಅನುಷ್ಠಾನದ ಮೂಲಕ ಮೋದಿ ಸರಕಾರ ದೇಶದ ಜನತೆಯ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ತಿಳಿಸಿದರು.
ಈ ಬಾರಿ ಪಕ್ಷ ಸರಳ ಸಜ್ಜನ ವ್ಯಕ್ತಿತ್ವದ ಕೋಟ ಶ್ರೀನಿವಾಸ ಪೂಜಾರಿ, ನಿವೃತ್ತ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ, ಅನುಭವಿ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಂತಹ ಸಮರ್ಥ ಅಭ್ಯರ್ಥಿಗಳನ್ನು ನೀಡಿದ್ದು, ಕಾರ್ಯಕರ್ತರು ಮತ್ತೂಮ್ಮೆ ಮೋದಿಯವರನ್ನು ಪ್ರಧಾನಿಯನ್ನಾ ಗಿಸುವ ಪಣತೊಟ್ಟಿದ್ದಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ, ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮುಖಂಡರಾದ ಅರುಣ್ ಕುಮಾರ್‌ಪುತ್ತಿಲ, ಶಾಸಕರಾದ ಸುನಿಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕೊಡ್ಗಿ, ಹರೀಶ್ ಪೂಂಜಾ ಹಾಗೂ ಪಕ್ಷದ ಮುಖಂಡರಾದ ಪ್ರಮೋದ್ ಮಧ್ವರಾಜ್, ಕೆ. ರಘುಪತಿ ಭಟ್, ಉದಯ ಕುಮಾರ್‌ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…