Featured

ಕರಾವಳಿ ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆ : ಪ್ರಮೋದ್ ಮಧ್ವರಾಜ್ – Vishwanews24

ಬಿಜೆಪಿ ಹಿಂದೂತ್ವ ರಕ್ಷಣೆ ಮಾಡುತ್ತಿದ್ದರೆ, ಕಾಂಗ್ರೆಸ್ ಹಿಂದೂ ವಿರೋಧಿ ನಿಲುವುಗಳನ್ನು ಅನುಸರಿಸುತ್ತಿದೆ

ನೌಕಾನೆಲೆಯಿಂದ ಮೀನುಗಾರರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚೆ : ಪ್ರಮೋದ್ ಮಧ್ವರಾಜ್

ಕಾರವಾರ: ನೌಕಾನೆಲೆಯ ಸಿಬ್ಬಂದಿ ಮೀನುಗಾರರಿಗೆ ತೊಂದರೆ ಕೊಡುತ್ತಿರುವ ಕುರಿತು ಚುನಾವಣೆ ಮುಗಿದ ಬಳಿಕ ಶಾಸಕಿ ರೂಪಾಲಿ ನಾಯ್ಕ ಅವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀನುಗಾರಿಕೆಗೆ ತೆರಳುವ ದೋಣಿಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದಂತೆ ಕೇಂದ್ರ ಸಚಿವರ ಬಳಿ ಮನವಿ ಮಾಡಿಕೊಳ್ಳಲಾಗುವುದು ಎಂದರು. ಕೇಂದ್ರ ಸರ್ಕಾರವೇ ಮೀನುಗಾರರ ದೋಣಿಗಳಿಗೆ 1488 ಲೀಟರ್ ಸೀಮೆಎಣ್ಣೆ ಕೊಡುವ ಯೋಜನೆ ಜಾರಿಗೆ ತಂದಿದೆ.

ಕೇಂದ್ರ ಸರ್ಕಾರವೇ ನೇರವಾಗಿ ಮೀನುಗಾರರಿಗೆ ಸೀಮೆಎಣ್ಣೆ ವಿತರಣೆ ಮಾಡುತ್ತಿರುವುದು ಇದೇ ಮೊದಲು ಎಂದು ಅವರು ತಿಳಿಸಿದರು. ರಾಜ್ಯ ಸರ್ಕಾರವೂ ಮೀನುಗಾರರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಸಬ್ಸಿಡಿ ಡಿಸೇಲ್ ಪ್ರಮಾಣವನ್ನು ಒಂದು ಲಕ್ಷದಿಂದ ಎರಡು ಲಕ್ಷ ಕಿಲೋ ಲೀಟರ್ಗೆ ಏರಿಕೆ ಮಾಡಲಾಗಿದೆ ಎಂದು ಮಧ್ವರಾಜ ತಿಳಿಸಿದರು.

ಸೀಬರ್ಡ್ ಯೋಜನೆಯಿಂದ ನಿರಾಶ್ರಿತರಾದವರಿಗೆ ಮಾಜಾಳಿಯಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ ಮಾಡಲಾಗುತ್ತಿದ್ದು, ಮೀನುಗಾರರ ಗತವೈಭವ ಮರುಕಳುಹಿ ಸಲಿದೆ ಎಂದು ಅವರು ತಿಳಿಸಿದರು. ಬಿಜೆಪಿ ಹಿಂದೂತ್ವ ರಕ್ಷಣೆ ಮಾಡುತ್ತಿದ್ದರೆ, ಕಾಂಗ್ರೆಸ್ ಹಿಂದೂ ವಿರೋಧಿ ನಿಲುವು ಗಳನ್ನು ಅನುಸರಿಸುತ್ತಿದೆ. ಇದನ್ನು ಅವರು ನೇರವಾಗಿ ಹೇಳುತ್ತಾರೆ.

ಉತ್ತರ ಕನ್ನಡ ಜಿಲ್ಲೆ ಅದರಲ್ಲೂ ಕರಾವಳಿ ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆಯಾಗಿದೆ ಎಂದರು. ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಅವರು, ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಚುನಾವಣೆಯಲ್ಲಿ ಅವರು ಜಯಗಳಿಸಿದ್ದಾರೆ.

ಗೆಲುವಿನ ಅಂತರ ಹೆಚ್ಚಿಸಿಕೊಳ್ಳಲು ಈ ಹೋರಾಟ ನಡೆಯುತ್ತಿದೆ ಎಂದು ಮಧ್ವರಾಜ ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago