Featured

ಕರಾವಳಿ ಜನರ ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ : ಪರಮೇಶ್ವರ್ – vishwanews24

ಕರಾವಳಿ ಜನರ ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ : ಪರಮೇಶ್ವರ್

ಬೆಂಗಳೂರು : ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಅಲ್ಲಿನ ಜನರು ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಆಪೇಕ್ಷೆ ಮೇರೆಗೆ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ. ಕಳೆದ ಬಾರಿ ಭೇಟಿ ನೀಡಿದಾಗ ಅಧಿಕಾರಿಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು. ಕೂಡಲೇ ಬದಲಾಯಿಸುವುದು ಸರಿಯಲ್ಲ ಎಂಬ ಕಾರಣಕ್ಕೆ ವರ್ಗಾವಣೆ ಮಾಡಿರಲಿಲ್ಲ. ಈ ಬಾರಿಯೂ ಧ್ವನಿ ಎತ್ತಿದ್ದರಿಂದ ಬದಲಾಯಿಸಿದ್ದೇವೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಯಾರು ಏನೇ ಹೇಳಿದರು, ನಾವು ಇದನ್ನು ಸಹಿಸುವುದಿಲ್ಲ. ಆ ಭಾಗದಲ್ಲಿ ಶಾಂತಿ ನೆಲೆಸಬೇಕು. ದಕ್ಷಿಣ ಕನ್ನಡ ಜಿಲ್ಲೆ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮಾದರಿಯಾಗಿರುವ ಜಿಲ್ಲೆ. ಯಾರು ಶಾಂತಿ ಕದಡುವುದಕ್ಕೆ ಪ್ರಯತ್ನಿಸುತ್ತಾರೆ, ಅವರನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದರು. ಅಧಿಕಾರಿಗಳನ್ನು ಅನಿವಾರ್ಯವಾಗಿ ಬದಲಾಯಿಸಬೇಕಾದ ಪರಿಸ್ಥಿತಿ ಬಂದಿದ್ದರಿಂದ ಮಂಗಳೂರು ಪೊಲೀಸ್ ಕಮಿಷನರ್, ದಕ್ಷಿಣ ಕನ್ನಡ ಎಸ್‌ಪಿ, ಉಡುಪಿ ಎಸ್‌ಪಿಯನ್ನು ಬದಲಾಯಿಸಿದ್ದೇವೆ. ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಈಗಾಗಲೇ ಅವರಿಗೆ ಸೂಚನೆ ಕೊಟ್ಟಿದ್ದೇವೆ. ಮುಂದೆ ಇದನ್ನು ನಡೆಯುವುದಕ್ಕೆ ಬಿಡುವುದಿಲ್ಲ. ಜನಸಮುದಾಯವು ಇದಕ್ಕೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.

ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆಗೆ ಕಾಲಾವಕಾಶ ಬೇಕಾಗಿತ್ತು. ನಿನ್ನೆ ಡಿಜಿಯವರೊಂದಿಗೆ ಚರ್ಚಿಸಿದ್ದೇನೆ. ಕಾರ್ಯಪಡೆಯನ್ನು ಯಾವ ರೀತಿ ನಿಯೋಜಿಸಬೇಕು. ಅವರಿಗೆ ನೀಡಬೇಕಾದ ಅಧಿಕಾರದ ಬಗ್ಗೆ ಚರ್ಚಿಸಲಾಗಿದೆ. ಉಡುಪಿ, ಮಂಗಳೂರು ಮತ್ತು ಶಿವಮೊಗ್ಗದಲ್ಲಿ ನಿಯೋಜಿಸುತ್ತೇವೆ ಎಂದರು.
ಪ್ರಚೋದನಾಕಾರಿ ಭಾಷಣಗಳಿಗೆ ಕಡಿವಾಣ ಹಾಕುತ್ತೇವೆ. ಈಗ ಇರುವ ಕಾನೂನು ಚೌಕಟ್ಟಿನಲ್ಲಿ ಮಾಡಬೇಕಾಗುತ್ತದೆ. ಇಂತಹ ಪ್ರಕರಣಗಳಿಗೆ ಕೋರ್ಟ್‌ಗಳಲ್ಲಿ ಅನೇಕ ಸಂದರ್ಭಗಳಲ್ಲಿ ತಡೆ ನೀಡುತ್ತಾರೆ. ಅಥವಾ ರದ್ದುಗೊಳಿಸುತ್ತಾರೆ. ಇದೆಲ್ಲವನ್ನು ನೋಡಿಕೊಂಡು ಮಾಡಬೇಕಾಗುತ್ತದೆ. ಸೋಷಿಯಲ್ ಮೀಡಿಯಾದಲ್ಲಿನ ಅನವಶ್ಯಕ ಪೋಸ್ಟ್‌ಗಳನ್ನು ನಿಯಂತ್ರಣ ಮಾಡುತ್ತೇವೆ ಎಂದರು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

7 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago