Featured

ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಅನುಮೋದನೆ – Vishwanews24

ಉಡುಪಿ /ದ. ಕ / ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚ್ಚಲಕ್ಕಿ  ವಿತರಿಸಲು ಕೇಂದ್ರ ಅನುಮೋದನೆ

ಉಡುಪಿ, : ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ M04, ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮ ಮತ್ತು ಅಭಿಲಾಷ್ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಗಳಲ್ಲಿ ವಿತರಿಸಲು ಕೇಂದ್ರ ಸರಕಾರ ಇದೀಗ ಏರಡನೇ ವರ್ಷಕ್ಕೂ ಅನುಮೋದನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲ್ಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆಯವರು ಮತ್ತು ರಾಜ್ಯ ಸಮಾಜ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಪ್ರಯತ್ನದಿಂದ ಕರ್ನಾಟಕ ಸರ್ಕಾರ ಸದರಿ ಬೇಡಿಕೆಯನ್ನು ಅನುಮೋದಿಸುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ – Vishwanews24

ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು, ಕೇಂದ್ರದ ಸದರಿ ಇಲಾಖಾ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು ಸದರಿ ಪ್ರಸ್ತಾವನೆಯನ್ನು ಅನುಮೋದಿಸುವಂತೆ ಕೋರಿದ್ದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಮನವಿಯನ್ನು ಪರಿಗಣಿಸಿದ ಪಿಯೂಷ್ ಗೋಯಲ್ ಅವರು ಮೇಲ್ಕಾಣಿಸಿದ ಕುಚ್ಚಲಕ್ಕಿ ಪ್ರಭೇಧಗಳನ್ನು ಬೆಳೆಯುವ ರಾಜ್ಯದ ಜಿಲ್ಲೆಗಳಿಂದ MSP ಮೂಲಕ ಖರೀದಿ ಮಾಡಿ ಪಡಿತರದ ಮೂಲಕ ವಿತರಿಸಲು ರಾಜ್ಯ ಸರಕಾರಕ್ಕೆ ಅನುಮತಿ ನೀಡಿರುತ್ತಾರೆ.

ಕೇಂದ್ರದ ಈ ಅನುಮತಿಯೊಂದಿಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಅದಲ್ಲದೇ, ಕುಚ್ಚಲಕ್ಕಿಯನ್ನೇ ಹೆಚ್ಚಾಗಿ ಸೇವಿಸುವ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಾರ್ವಜನಿಕರ ಬೇಡಿಕೆಯಾದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆಗೆ ಪುಷ್ಟಿ ಸಿಕ್ಕಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago