ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದಿನಿಂದ ಮುಂದಿನ 5 ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಅಥವಾ ಬಿಸಿಗಾಳಿ ಎಚ್ಚರಿಕೆ ನೀಡಿದೆ. ಕರ್ನಾಟಕ, ಗೋವಾ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ, ತಮಿಳುನಾಡು ಮತ್ತು ಕೇರಳ ಸೇರಿದಂತೆ ಭಾರತದ ಹೆಚ್ಚಿನ ಭಾಗಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳೊಂದಿಗೆ ಬಿಸಿ ಮತ್ತು ಆರ್ದ್ರ ವಾತಾವರಣದ ಮುನ್ಸೂಚನೆ ನೀಡಿದೆ. ಹೀಗಾಗಿ ಸಾರ್ವಜನಿಕರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸೂಚಿಸಿದೆ.
ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ಆರ್ದ್ರ ವಾತಾವರಣ ಇರುತ್ತದೆ. ಹವಾಮಾನ ಇಲಾಖೆಯು ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಅನ್ನು ಘೋಷಿಸಿದೆ. ಒಟ್ಟಾರೆಯಾಗಿ, ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ.
ಸುಡುವ ಸೂರ್ಯನಿಗೆ ದೀರ್ಘಕಾಲ ತೆರೆದುಕೊಳ್ಳುವವರಲ್ಲಿ ಶಾಖ-ಸಂಬಂಧಿತ ಅನಾರೋಗ್ಯದ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಆರೋಗ್ಯ ಕಾಳಜಿ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ.ಹೈಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ದೇಹದ ಉಷ್ಣತೆ 40 ಡಿಗ್ರಿ ಸೆಲ್ಸಿಯಸ್ ಮೀರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಹೀಟ್ ಸ್ಟೋಕ್ ಜೀವಕ್ಕೆ ಕುತ್ತು ತರುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…