Featured

ಕರಾವಳಿ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ ; ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ – Vishwanews24

ಕರಾವಳಿ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ..

ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ..

ಬೆಂಗಳೂರು : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ಆಹಾರಧಾನ್ಯವಾದ ಕುಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವಿಧಾನಸೌಧದಲ್ಲಿಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಶೇಷ ಸಭೆ ನಡೆಯಿತು.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರ ಪ್ರಮುಖ ಆಹಾರ ಧಾನ್ಯ ಕುಚಲಕ್ಕಿ ಆಗಿದ್ದು, ಈ ಭಾಗದ ಜನರಿಗೆ ಕುಚಲಕ್ಕಿ ಬಹುದಿನಗಳ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು ಈಗಾಗಲೆ ಕೇರಳ ರಾಜ್ಯಕ್ಕೆ ರಾಜ್ಯದ ನಿಯೋಗ ಭೇಟಿ ನೀಡಿ ಅಧ್ಯಯನ ನಡೆಸಿದೆ ಎಂದು ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಕರಾವಳಿ ಜಿಲ್ಲೆಗಳಿಗೆ ಪ್ರತಿ ತಿಂಗಳು 1ಲಕ್ಷ ಕ್ವಿಂಟಾಲ್ ಅಕ್ಕಿ ಅಗತ್ಯವಿದ್ದು, ವರ್ಷಕ್ಕೆ 12ಲಕ್ಷ ಕ್ವಿಂಟಾಲ್ ಅಗತ್ಯವಿದೆ. ಇದಕ್ಕಾಗಿ ವರ್ಷಕ್ಕೆ ಕನಿಷ್ಠ 18ಲಕ್ಷ ಕ್ವಿಂಟಾಲ್ ಭತ್ತ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ಜಯ, ಜ್ಯೋತಿ, ಎಂಎಫ್4 ಅಂತಹ ಭತ್ತದ ತಳಿಗಳಿಂದ ಮಾತ್ರ ಕುಚಲಕ್ಕಿ ಮಾಡಲು ಸಾಧ್ಯವಿದ್ದು, ಈ ಎರಡು ಜಿಲ್ಲೆಗಳಿಂದ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆಯಾಗುತ್ತಿದೆ. ಇನ್ನುಳಿದ ಭತ್ತವನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಗೆ ಕ್ರಮ ವಹಿಸಲಾಗುವುದು. ಆದರೆ ಪೂರ್ಣ ಪ್ರಮಾಣದಲ್ಲಿ ಭತ್ತ ಸಿಗುತ್ತಿಲ್ಲ ಎಂದರು.

ಈ ಸಂಬಂಧ ಹೆಚ್ಚುವರಿ ಬೇಡಿಕೆಯನ್ನು ಕೇರಳ ಮತ್ತು ತೆಲಂಗಾಣ ಜಿಲ್ಲೆಗಳಿಂದ ಭತ್ತ ಪೂರೈಸಿಕೊಳ್ಳಲು ಯೋಜಿಸಲಾಗಿದೆ. ಈ ಸಂಬಂಧ ಈ ವಾರಾಂತ್ಯದಲ್ಲಿ ಮತ್ತೊಂದು ಅಧ್ಯಯನ ತಂಡ ತೆಲಂಗಾಣಕ್ಕೆ ಭೇಟಿ ನೀಡಲಿದೆ ಎಂದರು.

ಅಧ್ಯಯನ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಬರುವ ವರ್ಷದಿಂದಲೇ ಈ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತೆ ಕನಗವಲ್ಲಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೋಡ್ಗಿ, ಅಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೋಮಣ್ಣನವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ವಿಜಯಕುಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago